Thursday, November 21, 2024

ಇಂದಿರಾ ಕ್ಯಾಂಟೀನ್​ನಲ್ಲಿ ಮಸಾಲ ರೈಸ್ ಸವಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ : ಜಿಲ್ಲೆಯ ಕಾರವಾರ ನಗರದ ಕೆಇಬಿ ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್​​ಗೆ ಇಂದು ಅನಿರೀಕ್ಷಿತವಾಗಿ ಭೇಟಿ ನೀಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಉಪಹಾರ ಸೇವಿಸಿ, ಆಹಾರದ ರುಚಿ ಮತ್ತು ಗುಣಮಟ್ಟದ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.

ಇಂದಿರಾ ಕ್ಯಾಂಟೀನ್​ನಲ್ಲಿ ಶುಚಿ ಮತ್ತು ರುಚಿಗೆ ಯಾವಾಗಲೂ ಹೆಚ್ಚಿನ ಪ್ರಥಮಾದ್ಯತೆ ನೀಡುವಂತೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು, ಕ್ಯಾಂಟೀನ್ ಉಪಯೋಗಕ್ಕೆ ನೀಡಿರುವ ಫ್ರಿಡ್ಜ್ ಮತ್ತಿತರ ಯಂತ್ರೋಪಕರಣಗಳನ್ನು ವ್ಯವಸ್ಥಿತವಾಗಿ ಬಳಸುವಂತೆ ಹಾಗೂ ಶುದ್ದ ಕುಡಿಯುವ ಯಂತ್ರದ ಮೂಲಕ ಗ್ರಾಹಕರಿಗೆ ನೀರು ಒದಗಿಸುವಂತೆ ಸೂಚನೆ ನೀಡಿದರು.

ಸರ್ಕಾರ ಸಾರ್ವಜನಿರಿಗೆ ಅತ್ಯಂತ ಕಡಿಮೆ ದರದಲ್ಲಿ ಊಟ ಮತ್ತು ಉಪಹಾರ ಒದಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್​ ಆರಂಭಿಸಿದೆ. ಈ ಸೇವೆಯನ್ನು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯುವ ಮೂಲಕ ಕಡಿಮೆ ವೆಚ್ಚದಲ್ಲಿ ಶುಚಿ ಮತ್ತು ರುಚಿಯಾದ ಆಹಾರ ಸೇವನೆ ಮಾಡುವಂತೆ ತಿಳಿಸಿದರು.

ಮಸಾಲ ರೈಸ್ ಸವಿದ ಜಿಲ್ಲಾಧಿಕಾರಿ

ಪ್ರತಿ ದಿನದ ಮೆನು ವಿನ ಪ್ರಕಾರವೇ ಆಹಾರ ತಯಾರಿಸಿ, ಗ್ರಾಹಕರಿಗೆ ವಿತರಿಸುವಂತೆ ಕ್ಯಾಂಟೀನ್​ ಸಿಬ್ಬಂದಿಗೆ ಸೂಚನೆ ನೀಡಿದರು. ಇಂದಿರಾ ಕ್ಯಾಂಟೀನ್​ನಲ್ಲಿ ಪ್ರತಿ ದಿನ ಬೆಳಗ್ಗೆ ಉಪಹಾರ ಮತ್ತು ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆ ಇದ್ದು, ಉಪಹಾರ ಕ್ಕೆ 5 ರೂ. ಮತ್ತು ಊಟಕ್ಕೆ 10 ರೂ. ದರ ಮಾತ್ರ ನಿಗದಿಪಡಿಸಿದೆ. ಜಿಲ್ಲಾಧಿಕಾರಿ ಅವರು ಕ್ಯಾಂಟಿನ್ ನಲ್ಲಿ ತಯಾರಿಸಿದ್ದ ಮಸಾಲ ರೈಸ್ ಸವಿದು, ರುಚಿಯ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.

RELATED ARTICLES

Related Articles

TRENDING ARTICLES