ಬೆಂಗಳೂರು : ನಮ್ಮ ಸರ್ಕಾರ ಆರುವರೆ ತಿಂಗಳುಗಳ ಆಡಳಿತಾವಧಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗಾಗಿ 73,928 ಕೋಟಿ ಅನುದಾನವನ್ನು ವೆಚ್ಚ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಅವರು, ಇದೇ ಅವಧಿಯಲ್ಲಿ ಹಿಂದಿನ ಸರ್ಕಾರದ ಅನುದಾನಕ್ಕಿಂತ 3,114 ಕೋಟಿ ರೂ. ಹೆಚ್ಚು ವೆಚ್ಚ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಉಚಿತ ಗ್ಯಾರಂಟಿ ಯೋಜನೆಗಳ ಮೂಲಕ ಜನರ ಜೀವನ ಮಟ್ಟ ಸುಧಾರಣೆ ಮಾಡಲಾಗಿದೆ. ಜೊತೆಗೆ, ರಾಜ್ಯದ ಅಭಿವೃದ್ಧಿ ಕಾರ್ಯಗಳನ್ನೂ ಸಮಾನವಾಗಿ ಮುನ್ನಡೆಸುವ ಮೂಲಕ ಕರ್ನಾಟಕ ಮಾದರಿ ಆಡಳಿತವೆಂಬ ಹೊಸ ಕಲ್ಪನೆಗೆ ನಾಂದಿಯಾಗಿದ್ದೇವೆ ಎಂದು ಹೇಳಿದ್ದಾರೆ.
ಯುವನಿಧಿ ಜಾರಿಗೆ ಮುಹೂರ್ತ ಫಿಕ್ಸ್
ನಾವು ಬಜೆಟ್ ನಲ್ಲಿ ಘೋಷಣೆ ಮಾಡಿದ 143 ಕಾರ್ಯಕ್ರಮಗಳಲ್ಲಿ 83ಕ್ಕೆ ಆದೇಶ ಹೊರಡಿಸಿ, ಜಾರಿಗೊಳಿಸಿದ್ದೇವೆ. 4 ಗ್ಯಾರಂಟಿ ಯೋಜನೆಗಳು ಈಗಾಗಲೇ ಜಾರಿಯಾಗಿವೆ, 5ನೇ ಗ್ಯಾರಂಟಿಯಾದ ಯುವನಿಧಿ ಜನವರಿಯಲ್ಲಿ ಜಾರಿಗೆ ಬರಲಿದೆ. ನಮ್ಮ ಸಾಧನೆಗಳು ಸದನದ ಒಳಗೆ ಮತ್ತು ಹೊರಗೆ ಹಾಳೆಗಳಿಗೆ ಸೀಮಿತವಾಗಿರದೆ ಜನರ ಬದುಕಲ್ಲಿ ಪ್ರತಿಫಲಿಸುತ್ತಿವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ನಮ್ಮ ಸರ್ಕಾರದ ಆರುವರೆ ತಿಂಗಳುಗಳ ಆಡಳಿತಾವಧಿಯಲ್ಲಿ ರೂ.73,928 ಕೋಟಿ ಅನುದಾನವನ್ನು ಅಭಿವೃದ್ಧಿ ಕಾರ್ಯಗಳಿಗಾಗಿ ವೆಚ್ಚ ಮಾಡಲಾಗಿದೆ. ಇದೇ ಅವಧಿಯಲ್ಲಿ ಹಿಂದಿನ ಸರ್ಕಾರದ ಅನುದಾನಕ್ಕಿಂತ ರೂ. 3,114 ಕೋಟಿ ಹೆಚ್ಚು ವೆಚ್ಚ ಮಾಡಲಾಗಿದೆ.
ಗ್ಯಾರಂಟಿ ಯೋಜನೆಗಳ ಮೂಲಕ ಜನರ ಜೀವನ ಮಟ್ಟ ಸುಧಾರಣೆ ಮತ್ತು ರಾಜ್ಯದ ಅಭಿವೃದ್ಧಿ ಕಾರ್ಯಗಳೆರಡನ್ನೂ… pic.twitter.com/lnYVDBj5BZ
— CM of Karnataka (@CMofKarnataka) December 9, 2023