Sunday, January 19, 2025

ಮೈಸೂರಿಗೆ ಬೇಕಾಗಿರುವ ಅಧಿಕಾರಿಗಳನ್ನು ಹಾಕಿಸಿಕೊಂಡ್ರೆ ತಪ್ಪೇನು? : ಯತೀಂದ್ರ ಸಿದ್ದರಾಮಯ್ಯ

ರಾಯಚೂರು : ಹಣ ಪಡೆದು ವರ್ಗಾವಣೆ ಮಾಡಿದ್ರೆ ಸಾಕ್ಷಿ ಕೊಡಲಿ. ಮೈಸೂರು ಜಿಲ್ಲೆಯಲ್ಲಿ ಬೇಕಾಗಿರುವ ಅಧಿಕಾರಿಗಳನ್ನು ಹಾಕಿಸಿಕೊಂಡ್ರೆ ತಪ್ಪೇನಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳ ವರ್ಗಾವಣೆಯಲ್ಲಿ ಯತೀಂದ್ರ ಕೈವಾಡ ಎಂಬ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ.

ವಿರೋಧ ಪಕ್ಷಗಳ ನಾಯಕರು ಆಧಾರವಿಲ್ಲದೆ ಆರೋಪ ಮಾಡುತ್ತಿವೆ. ಪ್ರತಿ ವರ್ಗಾವಣೆಯಲ್ಲಿ ಆಯಾ ಸರ್ಕಾರದ ಶಾಸಕರು ಕೇಳಿದ ಅಧಿಕಾರಿಗಳನ್ನು ಹಾಕೋದು ಸರ್ಕಾರದ ವಾಡಿಕೆ. ಪ್ರತಿಪಕ್ಷಗಳು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೀಗೆ ಮಾಡುತ್ತಿದ್ದಾರೆ ಎಂದು ತಿರುಗೇಟು ಕೊಟ್ಟಿದ್ದಾರೆ.

ಬಿಜೆಪಿ ಸರ್ಕಾರ ಇದ್ದಾಗ VST ಅಂತಿದ್ರು

ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ VST ಅಂತಿದ್ರು. ಆ ಆರೋಪವನ್ನು ಅವರದ್ದೇ ಪಕ್ಷದವರು ಮಾಡಿದ್ದರು. ನಾವ್ಯಾರು ಹೇಳಿರಲಿಲ್ಲ. ಕಾಂಗ್ರೆಸ್ ಸರ್ಕಾರ ಬಿಜೆಪಿಗಿಂತ ಭಿನ್ನವಾಗಿಲ್ಲ ಎಂದು ತೋರಿಸಲು ಹೀಗೆ ಮಾಡುತ್ತಿದ್ದಾರೆ. ಅವರಿಗೆ ಬೇರೆ ಕೆಲಸವಿಲ್ಲ, ಅದಕ್ಕೆ ಕಾಂಗ್ರೆಸ್​ ಸರ್ಕಾರದ ಬಗ್ಗೆ ಆರೋಪ ಮಾಡುತ್ತಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಚಾಟಿ ಬಿಸಿದ್ದಾರೆ.

RELATED ARTICLES

Related Articles

TRENDING ARTICLES