Sunday, November 24, 2024

ಮೋದಿಯವರು ಕರ್ನಾಟಕದ ಜನತೆಯ ಜೊತೆ ನಿಲ್ಲಬೇಕು : ಲೋಕಸಭೆಯಲ್ಲಿ ಸಂಸದೆ ಸುಮಲತಾ ಮನವಿ

ನವದೆಹಲಿ : ಸಂಸದೆ ಸುಮಲತಾ ಅಂಬರೀಶ್ ಅವರು ಲೋಕಸಭೆಯ ಶೂನ್ಯ ವೇಳೆಯಲ್ಲಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ಪ್ರಧಾನಿ ನರೇಂದ್ರ ಮೋದಿಯವರ ಗಮನ ಸೆಳೆದರು.

ಸದನದಲ್ಲಿ ಮಾತನಾಡಿದ ಅವರು, ಕರ್ನಾಟಕದ 236 ತಾಲೂಕುಗಳ ಪೈಕಿ 223 ತಾಲೂಕುಗಳು ಬರಪೀಡಿತವಾಗಿದ್ದು, ಅಂದಾಜು 37 ಸಾವಿರ ಕೋಟಿ ಹಾನಿಯಾಗಿದೆ ಎಂದು ವಿವರಿಸಿದರು.

ನನ್ನ ಮಂಡ್ಯ ಕ್ಷೇತ್ರದ ಬಹುತೇಕ ತಾಲೂಕುಗಳು ಬರದಿಂದ ತತ್ತರಿಸಿದ್ದು, ಶೇಕಡಾ 50 ರಿಂದ 70ರಷ್ಟು ಬೆಳೆ ಹಾನಿಯಾಗಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆ ಬಾರದೇ ಇರುವ ಕಾರಣದಿಂದಾಗಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ ಎಂದು ಪ್ರಸ್ತಾಪ ಮಾಡಿದರು.

ಈ ಸುದ್ದಿ ಓದಿದ್ದೀರಾ? : ಬಿಜೆಪಿ ಅಚ್ಚರಿ ಆಯ್ಕೆ : ಮೋಹನ್ ಯಾದವ್ ಮಧ್ಯಪ್ರದೇಶ ಸಿಎಂ

ಶೀಘ್ರ ಪ್ಯಾಕೇಜ್ ಘೋಷಣೆ ಮಾಡಿ

ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ಬರಪೀಡಿತ ಪ್ರದೇಶಗಳಿಗೆ ಆರ್ಥಿಕ ಸಹಾಯ ಒದಗಿಸುವಂತಹ ಪ್ಯಾಕೇಜ್ ಗಳನ್ನು ಘೋಷಣೆ ಮಾಡಬೇಕು. ಈ ಮೂಲಕ ಕರ್ನಾಟಕದ ಜನತೆಯ ಜೊತೆ ನಿಲ್ಲಬೇಕು ಎಂದು ಸಂಸದೆ ಸುಮಲತಾ ಮನವಿ ಮಾಡಿದರು.

RELATED ARTICLES

Related Articles

TRENDING ARTICLES