ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಸರ್ಕಾರದ ನಿರ್ದೇಶನದಂತೆ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ಮತ್ತೊಮ್ಮೆ ಮುಂದೂಡಿದೆ. ಡಿಸೆಂಬರ್ 31ರಂದು ನಿಗದಿಯಾಗಿದ್ದ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಿ, 2024ರ ಜನವರಿ 13ಕ್ಕೆ ಮುಂದೂಡಿದೆ. ಜತೆಗೆ ಕೆಲವು ಪರೀಕ್ಷೆ ಕೇಂದ್ರಗಳನ್ನೂ ಬದಲಾವಣೆ ಮಾಡಲಾಗಿದೆ.
ಕೆಸೆಟ್-2023ಕ್ಕೆ ಆನ್‌ಲೈನ್‌ನಲ್ಲಿ ರಿಜಿಸ್ಟ್ರೇಷನ್ ಪಡೆಯುವ ವೇಳೆ ಕಲಬುರಗಿ ಆಯ್ಕೆ ಮಾಡಿಕೊಂಡಿದ್ದವರು ಬೆಂಗಳೂರಿನಲ್ಲಿ ಪರೀಕ್ಷೆ ಬರೆಯಬೇಕು. ವಿಜಯಪುರದ ಬದಲು ತುಮಕೂರು ನಗರದಲ್ಲಿ ಪರೀಕ್ಷೆ ಬರೆಯಬೇಕು ಎಂದು ಕೆಇಎ ಪ್ರಕಟಣೆ ತಿಳಿಸಿದೆ.
ಧಾರವಾಡ ಜಿಲ್ಲಾ ಪರೀಕ್ಷಾ ಕೇಂದ್ರಗಳಿಗೆ ಹಾವೇರಿ ಜಿಲ್ಲಾ ಪರೀಕ್ಷಾ ಕೇಂದ್ರಗಳನ್ನು ಮತ್ತು ಮೈಸೂರು ಜಿಲ್ಲಾ ಪರೀಕ್ಷಾ ಕೇಂದ್ರಗಳಿಗೆ ಮಂಡ್ಯ ಜಿಲ್ಲಾ ಪರೀಕ್ಷಾ ಕೇಂದ್ರಗಳನ್ನು ಸೇರಿಸಲಾಗುತ್ತದೆ. ಉಳಿದ ಜಿಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ.
ಪರೀಕ್ಷಾ ಕೇಂದ್ರಗಳು
ಬೆಂಗಳೂರು, ಧಾರವಾಡ, ಮೈಸೂರು, ಶಿವಮೊಗ್ಗ, ಕಲಬುರಗಿ, ಮಂಗಳೂರು, ಬೆಳಗಾವಿ, ಬಳ್ಳಾರಿ, ವಿಜಯಪುರ, ದಾವಣಗೆರೆ, ತುಮಕೂರು.