ಭೋಪಾಲ್: ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಉಜೈನಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಮೋಹನ್ ಯಾದವ್ (58) ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಲಾಲ್ ಪರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಯಾದವ್ ಅವರಿಗೆ ರಾಜ್ಯಪಾಲ ಮಂಗುಭಾಯ್ ಪಟೇಲ್ ಅವರು ಪ್ರಮಾಣ ವಚನ ಬೋಧಿಸಿದರು. ಇದೇ ವೇದಿಕೆಯಲ್ಲಿ ಶಾಸಕರಾದ ರಾಜೇಂದ್ರ ಶುಕ್ಲಾ, ಜಗದೀಶ್ ದೇವಾ ಅವರು ನೂತನ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಇದನ್ನೂ ಓದಿ: ಮೆಟ್ರೋದಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಸ್ಟೇಷನ್ ಸೌಲಭ್ಯ!
ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಕಳೆದ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಶಿವರಾಜ್ ಸಿಂಗ್ ಚೌಹಾಣ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ, ಉತ್ತರಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
#WATCH | Former Madhya Pradesh CM Shivraj Singh Chouhan and Union Minister Jyotiraditya Scindia arrive at the venue of the swearing-in ceremony of Madhya Pradesh CM-designate Mohan Yadav, in Bhopal. pic.twitter.com/Nqf57A5UQJ
— ANI (@ANI) December 13, 2023