ಬೆಳಗಾವಿ : ರಾಜ್ಯದ ರೈತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಸಹಕಾರಿ ಬ್ಯಾಂಕ್‌ಗಳ ಸಾಲ ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಮಾತನಾಡಿದ ಅವರು, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಸಂಬಂಧಿಸಿದಂತೆ ಅವಧಿಯೊಳಗೆ ಸಾಲ ಮರುಪಾವತಿ ಮಾಡಿದವರಿಗೆ ಬಡ್ಡಿ ಮನ್ನಾ ಆಗಲಿದೆ ಎಂದು ಹೇಳಿದ್ದಾರೆ.
ನಮ್ಮ ಸರ್ಕಾರದ ಮೇಲೆ ಸಂಶಯ ಬೇಡ. ನಾವು ನುಡಿದಂತೆ ನಡೆಯುತ್ತೇವೆ. ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ನಾವು ಬದ್ಧ ಎಂದು ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ಮಾತು ಮುಗಿಸಿದ್ದಾರೆ.
2 ಲಕ್ಷ ರೂ.ವರೆಗೆ ಸಾಲ ಮನ್ನಾ ಮಾಡಿ
ಈ ಕುರಿತು ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, ರೈತರು ಅವಧಿಯೊಳಗೆ ಸಾಲ ಕಟ್ಟಲ್ಲ, ನೀವು ಬಡ್ಡಿ ಮನ್ನಾ ಮಾಡಲ್ಲ. ರೈತರ ಎರಡು ಲಕ್ಷ ರೂಪಾಯಿವರೆಗಿನ ಸಾಲ ಮನ್ನಾ ಮಾಡಬೇಕು. ಬರದಿಂದ ಕಂಗೆಟ್ಟ ರೈತರಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಿ ಎಂದು ಸಿಎಂ ಸಿದ್ದರಾಮಯ್ಯಗೆ ಒತ್ತಾಯ ಮಾಡಿದ್ದಾರೆ.