Sunday, November 3, 2024

New Year 2024: ಹೊಸ ವರ್ಷಕ್ಕೆ ಗೈಡ್ ಲೈನ್ಸ್ ರಿಲೀಸ್: ಸಲೆಬ್ರೆಷನ್​ ಗುಂಗಲ್ಲಿದ್ದವರಿಗೆ ಶಾಕ್!

ಬೆಂಗಳೂರು: ವರ್ಷಾಚರಣೆಗೆ ಇನ್ನೂ ಕೆಲವೇ ದಿನಗಳ ಮಾತ್ರ ಬಾಕಿ ಇದೆ. ಸಿಲಿಕಾನ್​ ಸಿಟಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಈ ಸಲ ಭಾರೀ ಭದ್ರತೆ ನೀಡಲು ಬೆಂಗಳೂರು ನಗರ ಪೊಲೀಸರು ಹಾಗೂ ಪಾಲಿಕೆ ಅಲರ್ಟ್ ಆಗಿ  ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ಧಾರೆ. 

ಹೊಸ ವರ್ಷಕ್ಕೆ ಪಾಲಿಕೆ ಹಾಗೂ ಪೊಲೀಸ್ ಇಲಾಖೆಯಿಂದ ಗೈಡ್ ಲೈನ್ಸ್ ರೆಡಿ ಮಾಡಿದ್ದು, ಇದರಿಂದ ಸಿಲಿಕಾನ್ ಸಿಟಿಯಲ್ಲಿ ನ್ಯೂ ಇಯರ್ ಗುಂಗಿನಲ್ಲಿದ್ದವರಿಗೆ ಲಗಾಮು ಬೀಳಲಿದೆ. ಈ ಬಾರೀ ಹೆಚ್ಚು ಸಿಸಿಟಿವಿ ಅಳವಡಿಕೆಗೆ ಪಾಲಿಕೆಗೆ ಸೂಚನೆ ನೀಡಲಾಗಿದೆ. ಅದರಲ್ಲೂ ಈ ಬಾರಿ ಪಾಲಿಕೆ, ಪೊಲೀಸ್ ಇಲಾಖೆ ಜೊತೆ ಕೈಜೋಡಿಸಿ ಕೆಲಸ ಮಾಡುತ್ತಿದೆ.

ಗೈಡ್ ಲೈನ್ಸ ಹೀಗಿದೆ

  • ರಾತ್ರಿ 1 ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಸಬೇಕು.
  • ಎಂ.ಜಿ.ರಸ್ತೆ,ಬ್ರಿಗೇಡ್ ರಸ್ತೆ, ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ.
  • ರಾತ್ರಿ 10 ಗಂಟೆ ಬಳಿಕ ಪ್ರಮುಖ ಫ್ಲೈ ಓವರ್ ಗಳು ಬಂದ್.
  • ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 200ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ.
  • ರಾತ್ರಿ 8 ಗಂಟೆ ಬಳಿಕ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್.
  • ಸೆಲೆಬ್ರೇಷನ್ ಗೆ ಬರುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ.
  • ಮಹಿಳೆಯರ ಸುರಕ್ಷತೆಗಾಗಿ ಮಹಿಳಾ ಪೊಲೀಸರ ನಿಯೋಜನೆ.
  • ಬಾರ್, ಪಬ್ ಗಳಿಗೂ ರಾತ್ರಿ 1 ಗಂಟೆ ಬಳಿಕ ಬಂದ್ ಗೆ ಸೂಚನೆ.
  • ನಗರದ ವಿವಿಧ ಭಾಗಗಳಲ್ಲಿ ಆಚರಣೆಗೆ ಅನುಮತಿ ಕಡ್ಡಾಯ.
  • ಲೌಡ್ ಸ್ಪೀಕರ್, ಪಟಾಕಿ ಸಿಡಿಸಲು ನಿರ್ಬಂಧ.
  • ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸಂಚಾರ.
  • ರಾತ್ರಿ 1 ಗಂಟೆ ತನಕ ನಮ್ಮ ಮೆಟ್ರೋ ಸಂಚಾರ.

ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಭರ್ಜರಿ ತಯಾರಿ ನಡೆಸಲಾಗಿದ್ದು, ಮಾದಕ ಲೋಕ ಕಡಿವಾಣ ಹಾಕುವುದಕ್ಕೆ ಪೊಲೀಸ್ ಇಲಾಖೆ ಪ್ಲಾನ್ ಹಾಕಿಕೊಂಡಿದೆ.

 

RELATED ARTICLES

Related Articles

TRENDING ARTICLES