ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದರ ಹಿನ್ನೆಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ಇತ್ತೀಚಿಗೆ ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಸಂಪುಟ ಸಹೋದ್ಯೋಗಿಗಳು ಐಷಾರಾಮಿ ಖಾಸಗಿ ವಿಮಾನದಲ್ಲಿ ಪ್ರಯಾಣಿಸಿದ್ದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿರುವ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅಧಿಕಾರಕ್ಕೆ ಬಂದು ಆರು ತಿಂಗಳು ಮುಗಿದರೂ ಒಂದೇ ಒಂದು ಗುಂಡಿ ಮುಚ್ಚುವ ಕಾಮಗಾರಿ ಕೂಡ ನಡೆದಿಲ್ಲ ಎಂದು ಕಿಡಿಕಾರಿದೆ.
ಈ ಕುರಿತು ಎಕ್ಸ್ನಲ್ಲಿ ಬರೆದುಕೊಂಡಿರುವ ಅವರು, ಇದು ಸ”ಮಜಾವಾದಿ”ಸಿದ್ದರಾಮಯ್ಯನವರ ಸಾಮಾನ್ಯ ಜೀವನ. ಶಾಲಾ ಮಕ್ಕಳು ಬಸ್ಸುಗಳು ಸಿಗದೇ ನೇತಾಡಿಕೊಂಡು BMTC ಹಾಗೂ KSRTC ಬಸ್ಗಳಲ್ಲಿ ಓಡಾಡ್ತಾರೆ. ಸರ್ಕಾರದ ಯೋಜನೆಗಳಿಗೆ ಅನುದಾನಗಳ ಕೊರತೆ. ಶಾಲೆಗಳ ನವೀಕರಣಕ್ಕೆ ಹಣದ ಕೊರತೆ ಹಾಗೂ ಕಾಂಗ್ರೆಸ್ ಭಾಗ್ಯಗಳಿಗೇ ಅನುದಾನದ ಕೊರತೆ ಉಂಟಾಗಿದೆ. ಇದರ ಮಧ್ಯೆ ಸಿದ್ದರಾಮಯ್ಯ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದಾರೆಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಚತೆ: ಪೋಷಕರು ಪ್ರತಿಭಟನೆ
ಇನ್ನೂ ಇದೇ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ.
“ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ ಜನರ ದುಡ್ಡು ಆಕಾಶದಲ್ಲಿ ಜಾತ್ರೆ”. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯುತ್ತಿದೆ, ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ, ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ, ಇಂಥಾ ಗಭೀರ ಪರಿಸ್ಥಿತಿಯಲ್ಲೂ ಶ್ರೀಮಂತಿಕೆಯ ದರ್ಪ ತೋರುವ, ಮೋಜು, ಮಸ್ತಿಯೇ ತನ್ನ ಜೀವನ ಶೈಲಿ ಎಂದು ಪ್ರದರ್ಶಿಸಿಕೊಳ್ಳುತ್ತಿರುವ ಸಚಿವ
ಸ”ಮಜಾವಾದಿ” ಸಿದ್ದರಾಮಯ್ಯನವರ ಸಾಮಾನ್ಯ ಜೀವನ!
ಶಾಲಾ ಮಕ್ಕಳು ಬಸ್ಸುಗಳು ಸಿಗದೆ ನೇತಾಡಿಕೊಂಡು ಬಿಎಂಟಿಸಿ/ಕೆ.ಎಸ್.ಆರ್.ಟಿ.ಸಿ ಬಸ್ಸುಗಳಲ್ಲಿ ಓಡಾಡುವುದು, ಸರ್ಕಾರದ ಯೋಜನೆಗಳಿಗೆ ಅನುದಾನಗಳ ಕೊರತೆ, ಶಾಲೆಗಳ ನವೀಕರಣಕ್ಕೆ ಹಣದ ಕೊರತೆ ಹಾಗು ಕಾಂಗ್ರೆಸ್ ಭಾಗ್ಯಗಳಿಗೇ ಅನುದಾನದ ಕೊರತೆ ಮಧ್ಯೆ ಸಿದ್ದರಾಮಯ್ಯನವರ ವಿಮಾನ ಪ್ರಯಾಣ! https://t.co/pqrgIt6uB1
— Basanagouda R Patil (Yatnal) (@BasanagoudaBJP) December 22, 2023
“ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ
ಜನರ ದುಡ್ಡು ಆಕಾಶದಲ್ಲಿ ಜಾತ್ರೆ”.
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯುತ್ತಿದೆ, ರೈತರು ಆತ್ಮ ಹತ್ಯೆಗೆ ಶರಣಾಗುತ್ತಿದ್ದಾರೆ, ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ, ಇಂಥಾ ಗಭೀರ ಪರಿಸ್ಥಿತಿಯಲ್ಲೂ ಶ್ರೀಮಂತಿಕೆಯ ದರ್ಪ ತೋರುವ, ಮೋಜು, ಮಸ್ತಿಯೇ ತನ್ನ ಜೀವನ ಶೈಲಿ ಎಂದು… pic.twitter.com/Bx5VLq1hsB— Vijayendra Yediyurappa (@BYVijayendra) December 22, 2023