ಬೆಂಗಳೂರು : ಹಾಲಿನ ದರ ಹೆಚ್ಚಳದ ಪ್ರಸ್ತಾಪವಿಲ್ಲ ಎಂದು ಕೆಎಂಎಫ್ ಸ್ಪಷ್ಟಪಡಿಸಿದೆ.
ನಂದಿನಿ ಬ್ರ್ಯಾಂಡ್ನ ಹಾಲು, ಮೊಸರು ಸೇರಿದಂತೆ ವಿವಿಧ ಉತ್ಪನ್ನಗಳ ದರವನ್ನು ಹೆಚ್ಚಿಸುವ ಪ್ರಸ್ತಾವನೆಯನ್ನು ಸಿಎಂ ಸಿದ್ದರಾಮಯ್ಯನವರ ಮುಂದೆ ಮಂಡಿಸಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಹೇಳಿದ್ದಾರೆ.
ಹಾಲು ಉತ್ಪಾದಕರ ಹಾಗೂ ಗ್ರಾಹಕರ ಸಮಸ್ಯೆಗಳ ಬಗ್ಗೆ ನಾವು ತಿಳಿದುಕೊಂಡಿದ್ದೇವೆ. ಕಳೆದ ಆಗಸ್ಟ್ ತಿಂಗಳಿನಲ್ಲಿ ಹಾಲು, ಮೊಸರು ದರವನ್ನು ಏರಿಸಿರುವುದರಿಂದ ಸದಸ್ಯಕ್ಕೆ ಮತ್ತೆ ದರ ಹೆಚ್ಚಿಸುವುದು ಸಮಂಜಸವಲ್ಲ ಅಂತ ಆಡಳಿತ ಮಂಡಳಿ ನಿರ್ಧರಿಸಿದೆ ಎಂದು ಮಾಹಿತಿ ನೀಡಿದ್ದಾರೆ.
ನಾವು ನಂದಿನಿ ಬ್ರ್ಯಾಂಡ್ನ ಮೂರು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಿದ್ದೇವೆ. ಎಮ್ಮೆಯ ಮೊಸರನ್ನು ಮಾರಾಟ ಮಾಡಲು ತೀರ್ಮಾನಿಸಿದ್ದೇವೆ. ಆಗಸ್ಟ್ 1ರಂದು ಹಾಲಿನ ದರ 3 ರೂ. ಹೆಚ್ಚಳ ಮಾಡಿದ್ದೇವೆ. ಅದನ್ನು ನೇರವಾಗಿ ರೈತರಿಗೆ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ @siddaramaiah ಅವರು ಇಂದು ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರಾಂಡ್ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ನಂದಿನಿ ಉತ್ಪನ್ನಗಳ ನೂತನ ಬ್ರಾಂಡ್ ರಾಯಭಾರಿ ಶಿವರಾಜ್ ಕುಮಾರ್ ಅವರು ಜಾಹಿರಾತು ಬಿಡುಗಡೆಗೊಳಿಸಿದರು.
ಸಮಾರಂಭದಲ್ಲಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್, ಸಚಿವ ಮಧು ಬಂಗಾರಪ್ಪ,… pic.twitter.com/b2rajdevf0
— CM of Karnataka (@CMofKarnataka) December 21, 2023