Saturday, November 2, 2024

ಧರ್ಮದ ವಿಷ ಬೀಜ ಬಿತ್ತುವುದೇ ‘ಮಜವಾದಿ’ ಸಿದ್ದರಾಮಯ್ಯರ ಗ್ಯಾರಂಟಿ : ಬಿಜೆಪಿ ಕಿಡಿ

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ರಾಜ್ಯ ಬಿಜೆಪಿ ಆಕ್ರೋಶ ಹೊರಹಾಕಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಅವರ ಗ್ಯಾರಂಟಿ ಎಂದು ಕಿಡಿಕಾರಿದೆ.

ಶಾಲಾ-ಕಾಲೇಜುಗಳಲ್ಲಿ ಮಕ್ಕಳು ಸಮಾನತೆಯಿಂದ ಕೂಡಿರಬೇಕು ಎಂದೇ ಸಮವಸ್ತ್ರ ನೀತಿಯನ್ನು ಜಾರಿಗೊಳಿಸಲಾಗಿದೆ. ಇದನ್ನು ಸುಪ್ರೀಂ ಕೋರ್ಟ್ ಸಹ ಎತ್ತಿ ಹಿಡಿದಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಾಲಾ ವಿದ್ಯಾರ್ಥಿಗಳ ಮನಸ್ಸಲ್ಲಿ ಸಮವಸ್ತ್ರ ವಿಚಾರವಾಗಿ ಬೇಧವನ್ನು ಹುಟ್ಟು ಹಾಕುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.

ವೋಟ್ ಬ್ಯಾಂಕ್‌ಗಾಗಿ ಸಂವಿಧಾನ ತಿದ್ದುಪಡಿ

ಪಿಎಫ್ಐ ಗೂಂಡಾಗಳು, ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ವೋಟ್ ಬ್ಯಾಂಕ್‌ಗಾಗಿ ಸಿದ್ದರಾಮಯ್ಯ ಅವರು ಸಂವಿಧಾನವನ್ನೇ ತಿದ್ದುಪಡಿ ಮಾಡಲು ಹೊರಟಿದ್ದಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದೆ.

ಈ ಹಿಂದೆ ರಾಜ್ಯದಲ್ಲಿ ಹಿಜಾಬ್ ನಿಷೇಧಿಸಿದ್ದ ಬಿಜೆಪಿ ಸರ್ಕಾರದ ಆದೇಶವನ್ನು ಇದೀಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಾಪಸ್ ಪಡೆಯಲು ನಿರ್ಧರಿಸಿದೆ. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.

RELATED ARTICLES

Related Articles

TRENDING ARTICLES