ಬೆಂಗಳೂರು : ಮುಂಬೈ ಇಂಡಿಯನ್ಸ್ಗೆ ಐಪಿಎಲ್-2024 ಆರಂಭಕ್ಕೂ ಮುನ್ನವೇ ಬಿಗ್ ಶಾಕ್ ಎದುರಾಗಿದೆ.
ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನ ಸ್ಥಾನಕ್ಕೆ ತಂದು ಕೂರಿಸಿದ್ದ ಮುಂಬೈಗೆ ಇದೀಗ ದೊಡ್ಡ ಆಘಾತ ಎದುರಾಗುವ ಸಾಧ್ಯತೆಯಿದೆ.
ಪಾದದ ಗಾಯದಿಂದ ಬಳಲುತ್ತಿರುವ ಪಾಂಡ್ಯ ಅವರು ಐಪಿಎಲ್-2024ರಲ್ಲಿ ಆಡುವ ಸಾಧ್ಯತೆಯಿಲ್ಲ. ಇದು ಮುಂಬೈ ಮ್ಯಾನೇಜ್ಮೆಂಟ್ಗೆ ತಲೆನೋವಾಗಿ ಪರಿಣಮಿಸಿದೆ. ಮುಂಬರುವ ಭಾರತ ಹಾಗೂ ಅಫ್ಘಾನಿಸ್ತಾನ ವಿರುದ್ಧದ ಟಿ-20 ಸರಣಿಯಲ್ಲಿ ಪಾಂಡ್ಯ ಆಡುವುದೂ ಅನುಮಾನ.
ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ
ವಿಶ್ವಕಪ್ ಟೂರ್ನಿಯಲ್ಲಿ ಪುಣೆಯಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದ ವೇಳೆ ಹಾರ್ದಿಕ್ ತಮ್ಮ ಪಾದಕ್ಕೆ ಗಾಯ ಮಾಡಿಕೊಂಡಿದ್ದರು. ಇದಾದ ಬಳಿಕ ತಂಡದಿಂದ ಹೊರಗುಳಿದಿದ್ದರು. ಇನ್ನೂ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹಾರ್ದಿಕ್ ಪಾಂಡ್ಯ ಫಿಟ್ನೆಸ್ ಕುರಿತು ಇನ್ನೂ ಯಾವುದೇ ಅಪ್ಡೇಟ್ ಬಂದಿಲ್ಲ ಎಂದು ಮೂಲಗಳು ತಿಳಿಸಿವೆ.