ನವದೆಹಲಿ: ಕುಸ್ತಿಪಟುಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರವು ನೂತನವಾಗಿ ರಚನೆಯಾಗಿದ್ದ ಭಾರತೀಯ ಕುಸ್ತಿ ಒಕ್ಕೂಟವನ್ನು ಅಮಾನತುಗೊಳಿಸಿ ಆದೇಶ ನೀಡಿದೆ.
WFI ನ ಮಾಜಿ ಅಧ್ಯಕ್ಷ ಬಿಜ್ ಭೂಷಣ್ ವಿರುದ್ದ ಕ್ರೀಡಾಪಟುಗಳಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಕೇಳಿಬಂದಿತ್ತು, ಈ ಕುರಿತು ಒಲಂಪಿಕ್ ಪದಕ ವಿಜೇತ ಕ್ರೀಡಾಪಟುಗಳು ಇದನ್ನು ವಿರೋಧಿಸಿ ಪ್ರತಿಭಟಿಸಿದ್ದರು. ಕಳೆದೆರಡು ದಿನಗಳ ಹಿಂದೆ WFI ಗೆ ನೂತನ ಅಧ್ಯಕ್ಷನಾಗಿ ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಆಯ್ಕೆಯಾದ ಬೆನ್ನಲ್ಲೇ ಮತ್ತೆ ಕ್ರೀಡಾಪಟುಗಳಾದ ಸಾಕ್ಷಿ ಮಲಿಕ್ ಕ್ರೀಡೆಗೆ ವಿದಾಯ ಘೋಷಿಸಿದ್ದರು ಮತ್ತು ಭಜರಂಗ್ ಪೂನಿಯಾ ತಮಗೆ ದೊರೆತ ಪದ್ಮ ಪ್ರಶಸ್ತಿಯನ್ನು ಹಿಂತಿರುಗಿಸುತ್ತಿರುವುದಾಗಿ ಪ್ರಕಟಿಸಿ ಪ್ರಧಾನಿ ಮೋದಿಗೆ ಪತ್ರ ಸಲ್ಲಿಸಿದ್ದರು.
ಇದನ್ನೂ ಓದಿ: ಪದ್ಮ ಪ್ರಶಸ್ತಿ ಹಿಂದಿರುಗಿಸುವುದಾಗಿ ಪ್ರಕಟಿಸಿದ ಕುಸ್ತಿ ಪಟು ಭಜರಂಗ್ ಪೂನಿಯಾ!
ಈ ಬೆಳವಣಿಗೆಗಳ ಬೆನ್ನಲ್ಲೇ ಇಂದು ಕೇಂದ್ರ ಕ್ರೀಡಾ ಇಲಾಖೆ ಸಚಿವ ಅನುರಾಗ್ ಠಾಕೂರ್ ಕುಸ್ತಿ ಒಕ್ಕೂಟದ ಸಂಜಯ್ ಸಿಂಗ್ ರನ್ನೂ ಅಮಾನತು ಮಾಡಿ ಆದೇಶಿಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಕ್ರೀಡಾಪಟುಗಳು ಸಂತಸವನ್ನು ವ್ಯಕ್ತಪಡಿಸುತ್ತಿದ್ದಾರೆ.