ಬೆಂಗಳೂರು : ರಾಜ್ಯದ ಅನ್ನದಾತರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಗುಡ್ ನ್ಯೂಸ್ ನೀಡಿದೆ. 4 ಲಕ್ಷ ಪಂಪ್‌ಸೆಟ್‌ಗಳನ್ನು ಶೀಘ್ರವೇ ಸಕ್ರಮಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಅಕ್ರಮ ವಿದ್ಯುತ್ ಸಂಪರ್ಕ ಹೊಂದಿರುವ ನಾಡಿನ ರೈತರ 4 ಲಕ್ಷ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸುವ ಮೂಲಕ, ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
ಒಂದೂವರೆ ದಶಕಕ್ಕಿಂತ ಹೆಚ್ಚು ಕಾಲ ಸಾಗುವಳಿ ಮಾಡಿದ ಬಗರ್ ಹುಕುಂ ಭೂಮಿಯನ್ನು ಸಕ್ರಮಗೊಳಿಸಿ, ಭೂಒಡೆತನದ ಹಕ್ಕನ್ನು ರೈತರಿಗೆ ನೀಡಲಾಗುವುದು. ಪ್ರತಿಯೊಬ್ಬ ರೈತನು ಸ್ವಂತ ಭೂಮಿಯಲ್ಲಿ ಶ್ರಮದ ಮೂಲಕ ನೆಮ್ಮದಿಯ ಬದುಕು ಕಟ್ಟಿಕೊಳ್ಳಲಿ ಎಂಬುದು ನಮ್ಮ ಆಶಯವಾಗಿದೆ ಎಂದು ಹೇಳಿದ್ದಾರೆ.
ಬರದ ಸಂಕಷ್ಟದ ನಡುವೆಯೂ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ 7 ಗಂಟೆಗಳ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಕೃಷಿಯನ್ನು ಲಾಭದಾಯಕ ಉದ್ಯೋಗವಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅಕ್ರಮ ವಿದ್ಯುತ್ ಸಂಪರ್ಕ ಹೊಂದಿರುವ ನಾಡಿನ ರೈತರ 4 ಲಕ್ಷ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸುವ ಮೂಲಕ, ಮೂಲಸೌಕರ್ಯಗಳನ್ನು ಒದಗಿಸಲಾಗುವುದು.
ಕೃಷಿಯನ್ನು ಲಾಭದಾಯಕ ಉದ್ಯೋಗವಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂಬ ವಾಗ್ದಾನವನ್ನು ರಾಷ್ಟ್ರೀಯ ರೈತರ ದಿನದ ಸಂದರ್ಭದಲ್ಲಿ ನೀಡುತ್ತಿದ್ದೇನೆ.… pic.twitter.com/akOcaefIXz
— CM of Karnataka (@CMofKarnataka) December 23, 2023