Tuesday, December 3, 2024

ಮುಸ್ಲಿಂ ಮಹಿಳೆಯ ಕುರಿತು ಅಕ್ಷೇಪಾರ್ಹ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ FIR

ಮೈಸೂರು: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ RSS​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಝೀರ್ ಚಿಕ್ಕನೇರಳೆ ದೂರು ನೀಡಿದ್ದಾರೆ.

ಈ ದೂರಿನ ಮೇರೆಗೆ ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಯ ಪೊಲೀಸರು IPC ಸೆಕ್ಷನ್ 354, 294, 509, 506, 153A, 295 295A, 298ರ ಅಡಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಡಿಸೆಂಬರ್ 24ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಹನುಮ ಜಯಂತಿ ಆಂಗವಾಗಿ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್, “ಮುಸ್ಲಿಂ ಮಹಿಳೆಯರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ” ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಹೊಸವರ್ಷಕ್ಕೆ ಬೆಂಗಳೂರು ನಗರದಾದ್ಯಂತ ಬಿಗಿ ಬಂದೋಬಸ್ತ್!

ಇದರ ವಿರುದ್ದ ನಜ್ಮಾ ದೂರು ನೀಡಿದ್ದು, ಪ್ರಭಾಕರ್ ಭಟ್‌ ವಿರುದ್ಧ ರೌಡಿ ಶೀಟ್ ತೆರೆಯುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ.

RELATED ARTICLES

Related Articles

TRENDING ARTICLES