ಕೇರಳ: ಶಬರಿಮಲೆ ಅಯ್ಯಪ್ಪ ದೇವಾಲಯದಲ್ಲಿ ಕಳೆದ 39 ದಿನಗಳಲ್ಲಿ 204.30 ಕೋಟಿ ಆದಾಯ ಸಂಗ್ರಹವಾಗಿದೆ ಎಂದು ದೇವಸ್ಥಾನ ಮಂಡಳಿ ಹೇಳಿದೆ.
ಭಕ್ತರು ಸಲ್ಲಿಸಿರುವ ಕಾಣಿಕೆಯಿಂದ 63.89 ಕೋಟಿ ಸಂಗ್ರಹವಾಗಿದೆ. ಅರವಣ ಪ್ರಸಾದ ಮಾರಾಟದಿಂದ 96.32 ಕೋಟಿ, ‘ಅಪ್ಪಂ’ ಪ್ರಸಾದ ಮಾರಾಟದಿಂದ 12.38 ಕೋಟಿ ಲಭಿಸಿದೆ. ಮಂಡಲ ಋತುವಿನಲ್ಲಿ ಡಿಸೆಂಬರ್ 25ರವರೆಗೆ 31,43,163 ಮಂದಿ ಭಕ್ತರು ಶಬರಿಮಲೆಗೆ ಭೇಟಿ ನೀಡಿದ್ದಾರೆ. ಇದೇ ಅವಧಿಯಲ್ಲಿ 7,25,049 ಮಂದಿ ಭಕ್ತರಿಗೆ ಉಚಿತವಾಗಿ ಆಹಾರ ಪೂರೈಸಲಾಗಿದೆ ಎಂದು ಪ್ರಶಾಂತ್ ತಿಳಿಸಿದ್ದಾರೆ.
ಇದನ್ನೂ ಓದಿ: ಮುಸ್ಲಿಂ ಮಹಿಳೆಯ ಕುರಿತು ಅಕ್ಷೇಪಾರ್ಹ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ FIR
ಮಂಡಲ ಪೂಜೆಯು ಡಿ.27 ಇಂದು ನಡೆಯಲಿದೆ. ಮಂಡಲ ಪೂಜೆಯ ಬಳಿಕ ದೇವಾಲಯದ ಬಾಗಿಲು ಮುಚ್ಚಲಿದ್ದು, ಇದೇ 30ರಂದು ಮತ್ತೆ ತೆರೆಯಲಿದೆ ಎಂದಿದ್ದಾರೆ.