Monday, November 25, 2024

ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಸೇರಿ 29 ಕಾರ್ಯಕರ್ತರು ಪರಪ್ಪನ ಅಗ್ರಹಾರಕ್ಕೆ!

ಬೆಂಗಳೂರು: ಕನ್ನಡಕ್ಕಾಗಿ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಕರವೇ ವತಿಯಿಂದ ಪ್ರತಿಭಟನೆ ನಡೆಸಲಾಗಿತ್ತು, ಈ ಹಿನ್ನೆಲೆ ನಗರದ ಚಿಕ್ಕಜಾಲ ಪೊಲೀಸರು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರಕ್ಕೆ ಕಳಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.

ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಸೇರಿ 29 ಕಾರ್ಯಕರ್ತರನ್ನು ರಾತ್ರೋರಾತ್ರಿ ಚಿಕ್ಕಜಾಲ ಪೊಲೀಸರು ಬಂಧಿಸಿದ್ದಾರೆ, ಇವರನ್ನು ಜನವರಿ 10 ರ ವರೆಗೆ ನ್ಯಾಯಾಂಗ ಬಂಧನದಲ್ಲಿರಿಸುವಂತೆ ದೇವನಹಳ್ಳಿ JMFC ನ್ಯಾಯಾಲಯ ಆದೇಶ ನೀಡಿದ ಹಿನ್ನೆಲೆ ಸೂಕ್ತ ಪೊಲೀಸ್​ ಬಂದೋಬಸ್ತ್​ ನೊಂದಿಗೆ ಬಂಧಿತರನ್ನು ಪರಪ್ಪನ ಅಗ್ರಹಾರಕ್ಕೆ ಕಳಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ಅಕ್ಕಿ ಬೆಲೆ ಇಳಿಕೆಗೆ ಕೇಂದ್ರ ಸರ್ಕಾರ ಸಿದ್ದತೆ !

ರಾಜಧಾನಿ ಬೆಂಗಳೂರಿನಲ್ಲಿ ಹೊರರಾಜ್ಯಗಳಿಂದ ಬಂದ ಉದ್ಯಮಿಗಳು ಕಾನೂನು ಮೀರಿ ತಮ್ಮ ಕಂಪೆನಿ, ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡವನ್ನು ಕಡೆಗಣಿಸಿ ಇಂಗ್ಲೀಷ್​ ಭಾಷೆಯಲ್ಲಿ ನಾಮಫಲಕಗಳನ್ನು ಹಾಕಲಾಗಿತ್ತು ಇದನ್ನು ವಿರೋಧಿಸಿ ಬುಧವಾರ ಕರವೇ ಪ್ರತಿಭಟನೆಗೆ ಕರೆ ನೀಡಿತ್ತು. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಕರವೇ ರಾಜ್ಯಾಧಕ್ಷ ನಾರಾಯಣಗೌಡ ಅವರನ್ನು ಬಂಧಿಸಿ ಜೈಲಿಗೆ ಕಳಿಸಿಲಾಗುತ್ತಿದೆ.

RELATED ARTICLES

Related Articles

TRENDING ARTICLES