Friday, November 22, 2024

ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಅರೆಸ್ಟ್!

ಬೆಂಗಳೂರು : ಮರ ಕಡಿದ ಪ್ರಕರಣ ಆರೋಪದಡಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಅರಣ್ಯ ಭವನದಲ್ಲಿ ವಿಕ್ರಂ ಸಿಂಹ ಅವರನ್ನು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ನಡೆಸಿರುವುದು ಬೆಳಕಿಗೆ ಬಂದಿತ್ತು. ಈ ಪ್ರಕರಣದಲ್ಲಿ ವಿಕ್ರಂ ಸಿಂಹ ಅವರ ಹೆಸರು ತಳುಕು ಹಾಕಿಕೊಂಡಿತ್ತು.

ಕೋಟ್ಯಂತರ ರೂಪಾಯಿ ಬೆಲೆ ಬಾಳುವ 126ಕ್ಕೂ ಹೆಚ್ಚು ಮರ ಕಡಿದು ಸಾಗಿಸಿದ ಆರೋಪದಲ್ಲಿ ವಿಕ್ರಂ ಸಿಂಹ ವಿರುದ್ಧ ದೂರು ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮರ ಕಡಿದ ಸ್ಥಳಗಳಲ್ಲಿ ಅಲ್ಲಿನ ತಹಸೀಲ್ದಾರರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು.

RELATED ARTICLES

Related Articles

TRENDING ARTICLES