ಕೊಡಗು : ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಅರ್ಜಿ ಗ್ರಾಮದ ಬರಪೊಳೆಯಲ್ಲಿ ನಡೆದಿದೆ.
ಮಂಗೇಟಿರ ಪಿ. ಆಕಾಶ್ ಬಿದ್ದಪ್ಪ, ಉಳುವಂಗಡ ಸುದೇಶ್ ಅಯ್ಯಪ್ಪ, ರಶಿಕ್ ಕುಂಜ್ಞಗಂಡ ಜೆ. ಮೃತಪಟ್ಟ ವಿದ್ಯಾರ್ಥಿಗಳು. ಮೃತರು ಪೊನ್ನಂಪೇಟೆ ಸಿಇಟಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.
ಸ್ನೇಹಿತರ ತಂಡ ನದಿಯಲ್ಲಿ ಈಜಲು ತೆರಳಿತ್ತು. ಈ ವೇಳೆ ಈ ದುರ್ಘಟನೆ ನಡೆದಿದೆ. ಮಾಹಿತಿ ತಿಳಿದ ಕೂಡಲೇ ಪೊನ್ನಂಪೇಟೆ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಮೃತರ ಗುರುತು ಪತ್ತೆಗೆ ಪೊಲೀಸರ ಕ್ರಮ ಕೈಗೊಂಡಿದ್ದಾರೆ. ಮೃತದೇಹಗಳನ್ನು ಗೋಣಿಕೊಪ್ಪ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.