ನವದೆಹಲಿ : 16ನೇ ಕೇಂದ್ರ ಹಣಕಾಸು ಆಯೋಗದ ಅಧ್ಯಕ್ಷರಾಗಿ ಡಾ. ಅರವಿಂದ್ ಪನಗಾರಿಯಾ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಅರವಿಂದ್ ಪನಗಾರಿಯಾ ಅವರು ನೀತಿ ಆಯೋಗದ ಮಾಜಿ ಅಧ್ಯಕ್ಷರೂ ಹೌದು. ಅಲ್ಲದೆ, ಭಾರತ-ಅಮೆರಿಕನ್ ಪ್ರಮುಖ ಆರ್ಥಿಕ ತಜ್ಞ ಎಂದು ಗುರುತಿಸಿಕೊಂಡಿದ್ದರು.
ಈ ಹಿಂದೆ 2015ರಿಂದ 2017ರವರೆಗೆ ಪನಗಾರಿಯಾ ಅವರು ನೀತಿ ಆಯೋಗದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಬಳಿಕ, ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ವಲಯದಲ್ಲಿ ಮುಂಚೂಣಿಯಲ್ಲಿದ್ದರು.
ಐದು ವರ್ಷಕ್ಕೊಮ್ಮೆ ಕೇಂದ್ರ ಸರ್ಕಾರ ರಚಿಸುವ ಹಣಕಾಸು ಆಯೋಗ ಕೇಂದ್ರ ಹಾಗೂ ರಾಜ್ಯಗಳ ನಡುವೆ ತೆರಿಗೆ ಸಂಗ್ರಹದ ಹಂಚಿಕೆ ಬಗ್ಗೆ ಸಲಹೆ, ಸೂಚನೆ ಹಾಗೂ ಶಿಫಾರಸುಗಳನ್ನು ನೀಡುತ್ತದೆ.
Dr Arvind Panagariya, former Vice Chairman, NITI Aayog appointed as Chairman, Finance Commission pic.twitter.com/CuI5MtaMPk
— ANI (@ANI) December 31, 2023