Friday, November 22, 2024

ಅದಾನಿ ಹಿಂಡನ್​ಬರ್ಗ್​ ವಿವಾದ: 3 ತಿಂಗಳಲ್ಲಿ ತನಿಖೆ ಮುಗಿಸಲು SBಗೆ ಸುಪ್ರೀಂ​ ಕೋರ್ಟ್ ಆದೇಶ

ನವದೆಹಲಿ: ಅದಾನಿ ಹಿಂಡನ್‌ಬರ್ಗ್ ಪ್ರಕರಣಗಳಲ್ಲಿ ಬಾಕಿ ಉಳಿದಿರುವ 2 ಪ್ರಕರಣಗಳ ತನಿಖೆಯನ್ನು 3 ತಿಂಗಳೊಳಗೆ ಪೂರ್ಣಗೊಳಿಸುವಂತೆ ಸೆಕ್ಯುರಿಟೀಸ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ(ಸೆಬಿ)ಗೆ ಸುಪ್ರೀಂ ಕೋರ್ಟ್ ಇಂದು ನಿರ್ದೇಶನ ನೀಡಿದೆ.

ಜೊತೆಗೆ ಸೆಬಿಯ ಎಫ್‌ಪಿಐ ನಿಯಮಾವಳಿಗಳನ್ನು ರದ್ದುಗೊಳಿಸಲು ಇದೇ ವೇಳೆ ನಿರಾಕರಿಸಿದೆ.

ನ್ಯಾಯಾಲಯಗಳು ಸೆಬಿಯ ತನಿಖೆಯಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ.ತನಿಖೆಯನ್ನು ಸೆಬಿಯಿಂದ ಎಸ್‌ಐಟಿಗೆ ವರ್ಗಾಯಿಸಲೂ ಯಾವುದೇ ಬಲವಾದ ಆಧಾರವಿಲ್ಲ.ಹಿಂಡನ್‌ಬರ್ಗ್ ಅಥವಾ ಬೇರೆ ಯಾವುದೇ ವರದಿಗಳು ಪ್ರತ್ಯೇಕ ತನಿಖೆಗೆ ಆದೇಶಿಸಲು ಸೂಕ್ತ ಕಾರಣಗಳಿಲ್ಲ ಎಂದು ಕೋರ್ಟ್ ತೀರ್ಪಿನಲ್ಲಿ ಹೇಳಿದೆ.

ಇದನ್ನೂ ಓದಿ: ಅಯೋಧ್ಯೆ ವಿಚಾರ: ಗೋದ್ರಾದಂತ ಹತ್ಯಾಕಾಂಡ ಸೃಷ್ಟಿಸಲು ಪ್ರಯತ್ನ:ಬಿ.ಕೆ ಹರಿಪ್ರಸಾದ್​

ಅದಾನಿ ಗ್ರೂಪ್ ವಿರುದ್ಧ ಅಮೆರಿಕದ ಹಿಂಡನ್‌ಬರ್ಗ್ ಸಂಸ್ಥೆ ಮಾಡಿದ ಆರೋಪಗಳ ವಿರುದ್ಧ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಇಂದು ಪ್ರಕಟಿಸಿದ ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ಪೀಠ, ಬಿಯ ತನಿಖೆಯಲ್ಲಿ ನ್ಯಾಯಾಲಯದ ಪ್ರವೇಶ ಅಧಿಕಾರವು ಸೀಮಿತವಾಗಿದೆ. ಎಫ್‌ಪಿಐ ಮತ್ತು ಎಲ್‌ಒಡಿಆರ್ ನಿಯಮಗಳ ಮೇಲಿನ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳುವಂತೆ ಬಿಗೆ ನಿರ್ದೇಶಿಸಲು ಯಾವುದೇ ಸೂಕ್ತ ಆಧಾರಗಳಿಲ್ಲ ಎಂದು ಹೇಳಿತು.

 

 

 

 

RELATED ARTICLES

Related Articles

TRENDING ARTICLES