Saturday, November 23, 2024

ಸರಗಳ್ಳರನ್ನು ಚೇಸ್​ ಮಾಡಿ ಹಿಡಿದ ಸಂಚಾರಿ ಪೊಲೀಸ್​: ಬಾಡಿ ಕ್ಯಾಮರಾದಲ್ಲಿ ದೃಶ್ಯ ಸೆರೆ!

ಬೆಂಗಳೂರು : ಮಹಿಳೆಯ ಚೈನ್​ ಕಸಿದು ಆಟೋದಲ್ಲಿ ಪರಾರಿಯಾಗುತ್ತಿದ್ದ ಇಬ್ಬರು ಖತರ್ನಾಕ್​ ಚೋರರನ್ನು ಮಾಗಡಿ ರಸ್ತೆ ಸಂಚಾರಿ ಪೊಲೀಸರು ಹಿಡಿದು ಜೈಲಿಗಟ್ಟಿರುವ ಘಟನೆ ನಡೆದಿದೆ.

ಸೆಂಥಿಲ್ ಹಾಗು ವಿಜಯ್​ ಬಂಧಿತ ಆರೋಪಿಗಳು, ಮಾಗಡಿ ರಸ್ತೆಯ ದಿನತಂತಿ ಜಂಕ್ಷನ್​ ಬಳಿ ಮಹಿಳೆಯೊಬ್ಬರು ತಮ್ಮ ಕೊರಳಿನಲ್ಲಿದ್ದ ಚೈನ್​ ಕಳ್ಳತನ ಮಾಡಿ ಆರೋಪಿಗಳು ಪರಾರಿಯಾಗುತ್ತಿದ್ದಾರೆ ಎಂದು ಮಾಗಡಿ ರಸ್ತೆ ಸಂಚಾರಿ ಪೊಲೀಸರಿಗೆ ತಿಳಿಸಿದ್ದಾರೆ. ಕೂಡಲೇ ಕಾರ್ಯಪ್ರೌವೃತ್ತರಾದ ಸಂಚಾರಿ ಪೊಲೀಸರು ಚೈನ್ ಕದ್ದು ಆಟೋದಲ್ಲಿ ಪರಾರಿಯಾಗುತ್ತಿದ್ದ ಕಳ್ಳರನ್ನು ಚೇಸ್​ ಮಾಡಿ ಹಿಡಿದು ಬಂಧಿತರಿಂದ ಚಿನ್ನದ ಸರ ಮತ್ತು ಹಣವನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಮಾಗಡಿ ರಸ್ತೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ವಿಚಾರ: ಗೋದ್ರಾದಂತ ಹತ್ಯಾಕಾಂಡ ಸೃಷ್ಟಿಸಲು ಪ್ರಯತ್ನ:ಬಿ.ಕೆ ಹರಿಪ್ರಸಾದ್​

ಸಂಚಾರಿ ಪೊಲೀಸರು ಆರೋಪಿಗಳನ್ನು ಹಿಡಿದು ವಿಚಾರಣೆ ನಡೆಸಿದ ಸಂಪೂರ್ಣ ದೃಶ್ಯಗಳು ಸಂಚಾರಿ ಪೊಲೀಸರು ಧರಿಸಿದ್ದ ಬಾಡಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಪ್ರಕರಣದಕ್ಕೆ ಸಂಬಂದಿಸಿ ಸಿಬ್ಬಂದಿಗಳ ಸಾಹಸಕ್ಕೆ ಬೆಂಗಳೂರು ನಗರ ಪೊಲೀಸ್​ ಕಮಿಷನರ್​ ಬಿ.ದಯಾನಂದ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಂಚಾರಿ ಜಂಟಿ ಪೊಲೀಸ್ ಆಯುಕ್ತ ಅನುಚೇತ್ ಅವರು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ್ದು, ಹೊಸ ವರ್ಷದಂದು ಮಾಗಡಿ ರಸ್ತೆಯ ದಿನತಂತಿ ಜಂಕ್ಷನ್​ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಚಾರಿ ಪೊಲೀಸರಾದ ಎಎಸ್​ಐ ರಾಮಚಂದ್ರ ಹಾಗು ಸಂಚಾರಿ ಪಿಸಿ ಸಂಧ್ಯ ಎನ್ನುವವರು ಕಳ್ಳರನ್ನು ಹಿಡಿದು ಒಡವೆಗಳನ್ನು ವಶಕ್ಕೆ ಪಡೆದಿದ್ದು ಅವರ ಸಾಹಸಕ್ಕೆ ಇಲಾಖೆ ಅಭಿನಂದಿಸುತ್ತದೆ ಎಂದಿದ್ದಾರೆ.

RELATED ARTICLES

Related Articles

TRENDING ARTICLES