ಆನೇಕಲ್ : ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಪೊಲೀಸರ ಸಮ್ಮುಖದಲ್ಲೇ ಯುವತಿ ಕಪಾಳ ಮೋಕ್ಷ ಮಾಡಿರುವ ಘಟನೆ ಇಂದು ಅತ್ತಿಬೆಲೆ ಸರ್ಕಲ್ನಲ್ಲಿ ನಡೆದಿದೆ.
ದೇವನಹಳ್ಳಿ ಮೂಲದ ಯೋಗೇಶ್ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕ, ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ಆನೇಕಲ್ ನ ಅತ್ತಿಬೆಲೆ ವೃತ್ತದಲ್ಲಿ ಬಸ್ ಗಾಗಿ ಯುವತಿಯ ಹಾಗು ಸ್ನೇಹಿತರು ಕಾಯುತ್ತಿದ್ದರು. ಈ ವೇಳೆ ಏಕಾಏಕಿ ಬಂದ ಯುವಕ, ಯುವತಿಯ ಬಳಿ ಅಸಭ್ಯವಾಗಿ ಮಾತನಾಡಿದ್ದಾನೆ. ಸ್ಥಳದಲ್ಲೇ ಇದ್ದ ಸಾರ್ವಜನಿಕರು ಹಾಗು ಯುವತಿಯ ಸ್ನೇಹಿತರು ಯುವಕನನ್ನು ಹಿಡಿದು ಥಳಿಸಿದ್ದಾರೆ.
ಇದನ್ನೂ ಓದಿ: ಸರಗಳ್ಳರನ್ನು ಚೇಸ್ ಮಾಡಿ ಹಿಡಿದ ಸಂಚಾರಿ ಪೊಲೀಸ್: ಬಾಡಿ ಕ್ಯಾಮರಾದಲ್ಲಿ ದೃಶ್ಯ ಸೆರೆ!
ವಿಚಾರ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಅತ್ತಿಬೆಲೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಯುವತಿ ಆರೋಪಿಗೆ ಕಪಾಳ ಮೋಕ್ಷ ಮಾಡಿದ್ದಾಳೆ.