ಬೆಂಗಳೂರು: ಕ್ರಿಮಿನಲ್ ವ್ಯಕ್ತಿ ‘ರಾಮಭಕ್ತ’ನ ಸೋಗು ಹಾಕಿಕೊಂಡರೆ ಕಾನೂನು ಕ್ರಮ ತೆಗೆದುಕೊಳ್ಳಬಾರದೇ? ಎಂದು ಸಚಿವ ಗುಂಡೂರಾವ್ ಬಿಜೆಪಿಯವರಿಗೆ ಪ್ರಶ್ನೆ ಮಾಡಿದ್ಧಾರೆ.
ಈ ಕುರಿತು ಎಕ್ಸ್ನಲ್ಲಿ ಬರೆದುಕೊಂಡಿರುವ ಅವರು ಅಕ್ರಮ ಸಾರಾಯಿ ಮಾರಾಟ, ದೊಂಬಿ, ಮಟ್ಕಾ, ಜೂಜಾಟ ಮುಂತಾದ 16 ಸಮಾಜಘಾತುಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಶ್ರೀಕಾಂತ್ ಪೂಜಾರಿ ಎಂಬಾತನ ಬಂಧನವನ್ನು ಬಿಜೆಪಿಯು ರಾಮಭಕ್ತ, ಕರಸೇವಕ ಎಂದು ಬಿಜೆಪಿ ಬಿಂಬಿಸುತ್ತಿದ್ದು, ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ.
ಇನ್ನೂ ಶ್ರೀಕಾಂತ್ ಪೂಜಾರಿ ವಿರುದ್ಧ 1992ರಿಂದ 2014ರವರೆಗೆ ಹುಬ್ಬಳ್ಳಿಯ ವಿವಿಧ ಠಾಣೆಗಳಲ್ಲಿ ಸುಮಾರು 16 ಕ್ರಿಮಿನಲ್ ಪ್ರಕರಣ ದಾಖಲಾಗಿವೆ. ಇಂತಹ ಕ್ರಿಮಿನಲ್ ಹಿನ್ನೆಲೆಯಿರುವ ವ್ಯಕ್ತಿ ರಾಮಭಕ್ತ ಎಂಬ ಸೋಗು ಹಾಕಿಕೊಂಡರೆ ಕಾನೂನು ಕ್ರಮ ತೆಗೆದುಕೊಳ್ಳಬಾರದೆ?” ಎಂದು ಕೇಳಿದ್ದಾರೆ.
1
ಹಳೆಯ ಪ್ರಕರಣವೊಂದರಲ್ಲಿ ಹುಬ್ಬಳ್ಳಿ ಪೊಲೀಸರು ಬಂಧಿಸಿರುವ ಶ್ರೀಕಾಂತ್ ಪೂಜಾರಿ ಶ್ರೀರಾಮನಂತೆ ಆದರ್ಶ ಪುರುಷನೂ ಅಲ್ಲ, ಶ್ರೀಕೃಷ್ಣನಂತೆ ಅವತಾರ ಪುರುಷನೂ ಅಲ್ಲ.ಆತ ವೃತ್ತಿಪರ ಕ್ರಿಮಿನಲ್ ಅಷ್ಟೆ.
ಶ್ರೀಕಾಂತ್ ಪೂಜಾರಿ ವಿರುದ್ಧ 1992 ರಿಂದ 2014 ರವರೆಗೆ ಹುಬ್ಬಳ್ಳಿಯ ವಿವಿಧ ಠಾಣೆಗಳಲ್ಲಿ ಸುಮಾರು 16 ಕ್ರಿಮಿನಲ್ ಪ್ರಕರಣ ದಾಖಲಾಗಿವೆ.… pic.twitter.com/12yix9r0uP
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 4, 2024
“ಹಳೆಯ ಪ್ರಕರಣವೊಂದರಲ್ಲಿ ಹುಬ್ಬಳ್ಳಿ ಪೊಲೀಸರು ಬಂಧಿಸಿರುವ ಶ್ರೀಕಾಂತ್ ಪೂಜಾರಿ ಶ್ರೀರಾಮನಂತೆ ಆದರ್ಶ ಪುರುಷನೂ ಅಲ್ಲ, ಶ್ರೀಕೃಷ್ಣನಂತೆ ಅವತಾರ ಪುರುಷನೂ ಅಲ್ಲ. ಆತ ವೃತ್ತಿಪರ ಕ್ರಿಮಿನಲ್ ಅಷ್ಟೆ” ಎಂದು ತಿಳಿಸಿದ್ದಾರೆ.
“ಶ್ರೀಕಾಂತ್ ಪೂಜಾರಿ ವಿರುದ್ಧ 1992 ರಿಂದ 2014ರವರೆಗೆ ಹುಬ್ಬಳ್ಳಿಯ ವಿವಿಧ ಠಾಣೆಗಳಲ್ಲಿ ಸುಮಾರು 16 ಕ್ರಿಮಿನಲ್ ಪ್ರಕರಣ ದಾಖಲಾಗಿವೆ. ರಾಜಕೀಯ ಕಾರಣಗಳಿಗಾಗಿ ಕ್ರಿಮಿನಲ್ ಹಿನ್ನೆಲೆ ಹೊಂದಿರುವ ವ್ಯಕ್ತಿಯ ಬೆಂಬಲಕ್ಕೆ ನಿಂತಿರುವ ರಾಜ್ಯದ ಬಿಜೆಪಿ ನಾಯಕರಿಗೆ ಮಾನ, ಮರ್ಯಾದೆ ಮತ್ತು ಸಂಸ್ಕಾರವೇ ಇಲ್ಲದಂತಾಗಿದೆ” ಎಂದು ಸಚಿವ ಗುಂಡೂರಾವ್ ಟೀಕಿಸಿದ್ದಾರೆ.
“ದೀರ್ಘಾವಧಿಯಿಂದ ಬಾಕಿ ಉಳಿದಿರುವ ಪ್ರಕರಣಗಳ ವಿಚಾರಣಾ ಪ್ರಮಾಣಪತ್ರವನ್ನು ನ್ಯಾಯಾಲಯ ಕೇಳಿದೆ. ಅದರಂತೆ ಪೊಲೀಸರು ಇತ್ಯರ್ಥವಾಗದ ಹಳೆಯ ಪ್ರಕರಣ ಸಂಬಂಧ ಶ್ರೀಕಾಂತ್ ಪೂಜಾರಿ ಹೆಸರಿದ್ದುದರಿಂದ ಬಂಧಿಸಿದ್ದಾರೆ. ನ್ಯಾಯಾಲಯದ ಸೂಚನೆಯ ಅನುಸಾರ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಈ ವಿಚಾರ ತಿಳಿದಿದ್ದರೂ ಬಿಜೆಪಿ ನಾಯಕರು ಕ್ರಿಮಿನಲ್ ಪರ ಪ್ರತಿಭಟನೆ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.