Wednesday, December 18, 2024

ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ : ಸ್ಥಳದಲ್ಲೇ ನಾಲ್ವರ ಸಾವು

ಹುಬ್ಬಳ್ಳಿ: ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳ್ಳಂ ಬೆಳಿಗ್ಗೆ ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ನಡೆದಿದೆ.

ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನದ ‌ಮೂಲದ ಮೂವರು, ಬೆಂಗಳೂರಿನ ಓರ್ವ ಸಾವನ್ನಪಿದ್ದು, ಮಣಿಕಂಠ (26), ಪವನ(23), ಚಂದನ(31), ಪ್ರಭು(34) ಎಂದು ಗುರುತಿಸಲಾಗಿದೆ.  ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸ್ಥಳಕ್ಕೆ ಧಾರವಾಡ ಎಸ್​​ಪಿ ಡಾ.ಗೋಪಾಲ ಬ್ಯಾಕೋಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಪ್ರಕರಣ ಕುಂದಗೋಳ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

 

RELATED ARTICLES

Related Articles

TRENDING ARTICLES