ಬೆಂಗಳೂರು : ಸಿಎಂ ಸಿದ್ದರಾಮಯ್ಯನವರೇ ನಿಮಗೆ ನಾಚಿಗೆ ಆಗಲ್ವಾ? ನಮ್ಮ ಸರ್ಕಾರದಂತೆ ನೀವು ಹಣ ಕೊಡಿ, ಇಲ್ಲವಾದಲ್ಲಿ ನೀವು ರಾಜೀನಾಮೆ ಕೊಡಿ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ಬಂದರೂ ರೈತರಿಗೆ ನಯಾ ಪೈಸೆ ಬಿಡುಗಡೆ ಮಾಡಿಲ್ಲ. ಯಾವುದೇ ರೈತರಿಗೆ ಬರ ಪರಿಹಾರದ ಹಣ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಸರ್ಕಾರದ ಖಜಾನೆ ಖಾಲಿ ಆಗಿದೆಯೇ?
ರಾಜ್ಯದ ಬೇಜವಾಬ್ದಾರಿ ಸರ್ಕಾರದ ವಿರುದ್ಧ ಗವರ್ನರ್ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ಕೊಟ್ಟಿದ್ದೇವೆ. ರಾಜ್ಯದಲ್ಲಿ 200 ರಿಂದ 700 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕಡೆ ಸರ್ಕಾರ ತಿರುಗಿಯೂ ನೋಡುತ್ತಿಲ್ಲ. ಸರ್ಕಾರದ ಖಜಾನೆ ಖಾಲಿ ಆಗಿದೆಯೇ? ಎಂದು ಪ್ರಶ್ನಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? : ರೈತರ ಪಾಲಿಗೆ ಸರ್ಕಾರ ಸತ್ತಂತೆ : ಬೊಮ್ಮಾಯಿ
ರೈತರ ಸಾವಿಗೆ ಕಿಂಚಿತ್ತೂ ಬೆಲೆ ಕೊಟ್ಟಿಲ್ಲ
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರೈತರ ಸಾವಿಗೆ ಕಿಂಚಿತ್ತೂ ಬೆಲೆ ಕೊಟ್ಟಿಲ್ಲ. ರೈತರಿಗೆ ನೆರವು ನೀಡಲು ಮುಂದಾಗದ ಸರ್ಕಾರ ಕೇವಲ ಕೇಂದ್ರ ಸರ್ಕಾರವನ್ನು ದೂರುತ್ತಿದೆ. ಇವರು ಕೊಡುತ್ತಿರುವುದು ನೂರು ಕೋಟಿ ಮಾತ್ರ. ರೈತರಿಗೆ 2 ಸಾವಿರ ರೂಪಾಯಿ ಕೊಡುತ್ತಿದ್ದಾರೆ ಎಂದು ಆರ್. ಅಶೋಕ್ ತಿಳಿಸಿದ್ದಾರೆ.