ಚಿಕ್ಕಬಳ್ಳಾಪುರ : ಸಂಸದ ಪ್ರತಾಪ್ ಸಿಂಹನಂತಹ ಅಯೋಗ್ಯ, ಮುಠ್ಠಾಳ ಮತ್ತೊಬ್ಬನಿಲ್ಲ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಕಿಡಿಕಾರಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತನಾಡಿದ್ರೆ ಹುಷಾರ್..! ಪರಿಣಾಮ ನೆಟ್ಟಗಿರಲ್ಲ. ನಿಮ್ಮ ಬಾಯಿ ತೆವಲನ್ನು ಕಡಿಮೆ ಮಾಡಿ ಸುಮ್ಮನೆ ಇರಬೇಕು ಎಂದು ಹರಿಹಾಯ್ದಿದ್ದಾರೆ.
ಸಂಸತ್ ಭವನದಲ್ಲಿ ಸ್ಮೋಕ್ ಬಾಂಬ್ ಹಾಕಿದವನಿಗೆ ಪಾಸ್ ನೀಡಿದ್ದೀರಿ. ನೀವು ದೇಶ ದ್ರೋಹಿ ಅಲ್ಲವೇ? ಈ ಬಾರಿ ಚುನಾವಣೆಯಲ್ಲಿ ಗೆಲ್ಲುವುದಿಲ್ಲ. ಈ ಬಾರಿ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಯತೀಂದ್ರ ಸಿದ್ದರಾಮಯ್ಯರೇ ಗೆಲ್ಲೋದು ಎಂದು ಅಚ್ಚರಿಕೆ ಹೇಳಿಕೆ ನೀಡಿದ್ದಾರೆ.
ನಾನೂ ಕೂಡ ಶ್ರೀರಾಮನ ಭಕ್ತ
ರಾಮ ಹಿಂದೂಗಳ ಆರಾಧ್ಯ ದೈವ. ನಾನೂ ಕೂಡ ಶ್ರೀರಾಮನ ಭಕ್ತ. ಅಲ್ಲಾಹು, ಏಸುವನ್ನು ಕೂಡ ಗೌರವಿಸುತ್ತೇವೆ. ಆದರೆ, ಬಿಜೆಪಿಗರಂತೆ ಧರ್ಮಗಳ ನಡುವೆ ತಂದಿಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.