ಉಡುಪಿ:ದೇಶದಲ್ಲಿ ಸಾಮರಸ್ಯ ಬೆಳೆಯಲು ಮಠಗಳು ದಾರಿದೀಪವಾಗಬೇಕು ಎಂದು ವಿಧಾನಸಭೆ ಸಭಾಪತಿ ಯು.ಟಿ ಖಾದರ್ ಹೇಳಿದರು.
ಕೃಷ್ಣ ಮಠದ ಪುತ್ತಿಗೆ ಪರ್ಯಾಯ ದರ್ಬಾರ್ನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಧಾರ್ಮಿಕ ಕೇಂದ್ರಗಳಿಗೆ ಸಮಾಜವನ್ನು ತಿದ್ದುವ ಶಕ್ತಿಯಿದೆ. ಸಮಾಜ ಒಡೆದು ಹೋಗುವ ಸಂದರ್ಭದಲ್ಲಿ ಮಠಾಧೀಶರು ಜೋಡಿಸಬೇಕು ಎಂದು ಹೇಳಿದ್ದರು.
ಇದನ್ನೂ ಓದಿ: ಶ್ರೀರಾಮಚಂದ್ರನ ಉಚಿತ ಟ್ಯಾಟೊ ಅಭಿಯಾನ
ಪುತ್ತಿಗೆ ಶ್ರೀಗಳು ಧಾರ್ಮಿಕವಾಗಿ ದೇಶ-ವಿದೇಶದಲ್ಲಿ ತೊಡಗಿಸಿಕೊಂಡವರು ಅವರ ಪರ್ಯಾಯದಲ್ಲಿ ಭಾಗಿಯಾಗಿರೋದು ಪುಣ್ಯದ ಕೆಲಸ ಎಂದರು.
ಹಿಂದಿನಿಂದಲೂ ನಾನು ಕೃಷ್ಣ ಮಠಕ್ಕೆ ಸಂಬಂಧಪಟ್ಟ ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಮಠ ಕೇವಲ ಧಾರ್ಮಿಕವಾಗಿ ಕಾರ್ಯಾಚರಿಸದೆ, ಶೈಕ್ಷಣಿಕ, ಸಾಮಾಜಿಕವಾಗಿ ಕೂಡಾ ಕೆಲಸ ಮಾಡುತ್ತಿದೆ ಎಂದು ಹೇಳಿದರು.