ಬೆಂಗಳೂರು: ಕರ್ನಾಟಕ ಸರ್ಕಾರವು ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಮತ್ತೊಮ್ಮೆ ಹೆಚ್ಚಿಸಲು ಪ್ರಸ್ತಾಪಿಸಿರುವುದಾಗಿ ವರದಿಯಾಗಿದೆ.
ಒಂದು ವೇಳೆ ಇದು ನಿಜವಾದಲ್ಲಿ ಪ್ರತಿ 650 ಮಿಲಿ ಬಿಯರ್ ಬಾಟಲಿಗೆ 8-10 ರೂ. ವರೆಗೆ ದರ ಹೆಚ್ಚಾಗಲಿದೆ. ಕರ್ನಾಟಕ ಅಬಕಾರಿ ನಿಯಮಗಳು, 1968ಕ್ಕೆ ತಿದ್ದುಪಡಿ ಮಾಡಲು ಕರಡು ಅಧಿಸೂಚನೆ ರೂಪಿಸಲಾಗಿದ್ದು, ಇದರಲ್ಲಿ ದರ ಹೆಚ್ಚಳವನ್ನು ಪ್ರಸ್ತಾಪಿಸಲಾಗಿದೆ.ದರ ಹೆಚ್ಚಳಕ್ಕೆ ಅವಕಾಶ ನೀಡುವ ಹೊಸ ನಿಯಮಗಳು ಈ ತಿಂಗಳ ಕೊನೆಯಲ್ಲಿ ಅಥವಾ ಫೆಬ್ರವರಿ ಆರಂಭದಲ್ಲಿ ಅಂತಿಮಗೊಳ್ಳುವ ಸಾಧ್ಯತೆಯಿದೆ.
ಇದನ್ನೂ ಓದಿ: ಹನುಮ ಜನ್ಮಸ್ಥಳ ಅಭಿವೃದ್ಧಿ ಮುಂದಿನ ಗುರಿ: ಬಸವರಾಜ ಬೊಮ್ಮಾಯಿ
ಕರ್ನಾಟಕದಲ್ಲಿ ತಯಾರಿಸಲಾದ ಅಥವಾ ರಾಜ್ಯಕ್ಕೆ ಆಮದು ಮಾಡಿಕೊಳ್ಳುವ ಬಿಯರ್ ಬಾಟಲಿಯ ಮೇಲೆ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇಕಡಾ 185 ರಿಂದ ಶೇಕಡಾ 195 ಕ್ಕೆ ಶೇಕಡಾ 10 ರಷ್ಟು ಹೆಚ್ಚಿಸಲಾಗುತ್ತದೆ.