ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ತನಿಖೆ ನಡೆಸುತ್ತಿರುವ ಎಸ್ಐಟಿ ವಿಚಾರಣೆಗೆ ಕರೆದವರನ್ನೆಲ್ಲಾ ನಿನ್ನೆ ವಶಕ್ಕೆ ಪಡೆದಿತ್ತು. ಈ ಪೈಕಿ ಇಬ್ಬರು ಪೊಲೀಸರಿದ್ದರು ಎಂದು ತಿಳಿದುಬಂದಿದೆ.
ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ಬಾಬು ಹಾಗೂ ಸೈಬರ್ ಎಕ್ಸ್ಪರ್ಟ್ ಸಂತೋಷ್ ಎಂಬವರನ್ನು ನಿನ್ನೆ ವಶಕ್ಕೆ ಪಡೆಯಲಾಗಿದ್ದು, ಇಂದು ಮಧ್ಯಾಹ್ನ ಮೂರು ಘಂಟೆಗೆ ನ್ಯಾಯಾಲಯದ ಮುಂದೆ ಹಾಜರು ಪಡಿಸಲು ಎಸ್ಐಟಿ ಸಿದ್ಧತೆ ನಡೆಸುತ್ತಿದೆ.
ಇದನ್ನೂ ಓದಿ:ನಿವೃತ್ತಿಯಾದರೂ ಕರ್ತವ್ಯಕ್ಕೆ ಹಾಜರಾಗುತ್ತಿದ್ದ 2000 IAS, KAS ಅಧಿಕಾರಿಗಳಿಗೆ ಗೇಟ್ ಪಾಸ್!
ಎಸ್ಐಟಿ ರಚನೆಯಾಗಿ ಆರು ತಿಂಗಳು ಕಳೆದಿದ್ದರೂ ಇದುವರೆಗೆ ಯಾರನ್ನೂ ಅರೆಸ್ಟ್ ಮಾಡಿರಲಿಲ್ಲ. ಪ್ರಕರಣದಲ್ಲಿ ಸಾವಿರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂದು ಕಾಂಗ್ರೆಸ್ ಅರೋಪ ಮಾಡಿತ್ತು. ಆದರೆ ಈಗ ತನಿಖೆ ವೇಳೆ ಕೇವಲ ಮೂರೂವರೆ ಲಕ್ಷ ರೂಪಾಯಿ ಮೌಲ್ಯದ ಬಿಟ್ ಕಾಯಿನ್ ವರ್ಗಾವಣೆಯಾಗಿರುವ ಮಾಹಿತಿ ಲಭ್ಯವಾಗಿದೆ. ಸದ್ಯ ಒಂದೇ ಒಂದು ಬಿಟ್ ಕಾಯಿನ್ನ್ನು ಎಸ್ಐಟಿ ವಶಕ್ಕೆ ಪಡೆದುಕೊಂಡಿಲ್ಲ.