Friday, November 22, 2024

ನಾಳೆಯಿಂದ ನಮ್ಮ ಮೆಟ್ರೋ ರೈಲು ಸಂಚಾರ ಸ್ಥಗಿತ : ಇಲ್ಲಿದೆ ಮಾಹಿತಿ

ಬೆಂಗಳೂರು: ನಾಳೆಯಿಂದ ನಮ್ಮ ಮೆಟ್ರೊದ ಹಸಿರು ಮಾರ್ಗದ ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು 3 ದಿನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು BMRCL ಪ್ರಕಟಣೆಯಲ್ಲಿ ತಿಳಿಸಿದೆ.

ನಾಗಸಂದ್ರದಿಂದ ಮಾದಾವರವರೆಗಿನ ವಿಸ್ತರಿತ ಮಾರ್ಗದ ಪೂರ್ವ ನಿಯೋಜಿತ ಕಾಮಗಾರಿಗಳನ್ನು ಕೈಗೊಳ್ಳುವ ಸಲುವಾಗಿ, ಜ.26ರಿಂದ 28ರವರೆಗೆ ಮೆಟ್ರೊ ರೈಲು ಸೇವೆಗಳು ಲಭ್ಯವಿರುವುದಿಲ್ಲ ಎಂದು ಹೇಳಿದೆ.

ಈ ದಿನಗಳಲ್ಲಿ ಪೀಣ್ಯ ಇಂಡಸ್ಟ್ರಿ ಮತ್ತು ರೇಷ್ಮೆ ಸಂಸ್ಥೆ ನಿಲ್ದಾಣಗಳ ನಡುವಿನ ರೈಲು ಸಂಚಾರ ಎಂದಿನಂತೆ ಇರಲಿದೆ. ನೇರಳೆ ಬಣ್ಣದ ಮಾರ್ಗದಲ್ಲೂ ಯಾವುದೇ ವ್ಯತ್ಯಯ ಇರುವುದಿಲ್ಲ. ಜ. 29ರ ಬೆಳಿಗ್ಗೆ 5 ಗಂಟೆಯಿಂದ ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ಸೇವೆಗಳು ಪುನರಾರಂಭಗೊಳ್ಳಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಇದನ್ನೂ ಓದಿ: ಅಪೇಕ್ಷೆ ಇಲ್ಲದೆ ಪಕ್ಷಕ್ಕೆ ಮತ್ತೆ ಜಗದೀಶ್ ಶೆಟ್ಟರ್ ಮರಳಿದ್ದಾರೆ : ಬಿ.ವೈ ವಿಜಯೇಂದ್ರ  

ಈ ಮೂರು ದಿನ ಪೀಣ್ಯ ಇಂಡಸ್ಟ್ರಿ ಮತ್ತು ಗೊರಗುಂಟೆಪಾಳ್ಯ ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚಿನ ಜನಸಂದಣಿ ಉಂಟಾಗುವ ಸಾಧ್ಯತೆ ಇರುವುದರಿಂದ, ವಾಟ್ಸ್‌ಆ್ಯಪ್, ನಮ್ಮ ಮೆಟ್ರೊ ಅಥವಾ ಇತರ ಅಪ್ಲಿಕೇಶನ್‌ಗಳ ಮೂಲಕ ಕ್ಯೂಆ‌ರ್ ಟಿಕೆಟ್‌ಗಳನ್ನು ಖರೀದಿಸಿ ಎಂದು ಪ್ರಯಾಣಿಕರಲ್ಲಿ ಮನವಿ ಮಾಡಿದೆ.

ಇದರಿಂದಾಗಿ ಪ್ರಯಾಣಿಕರಿಗೆ ಆಗುವ ಅನಾನುಕೂಲತೆಗೆ ವಿಷಾದಿಸುತ್ತೇವೆ ಹಾಗೂ ನಾಗಸಂದ್ರದ ವಿಸ್ತರಣಾ ಮಾರ್ಗದ ಕಾರ್ಯಾರಂಭಕ್ಕೆ ಸಂಬಂದಿಸಿದ ಕಾಮಗಾರಿಗಳನ್ನು ತ್ವರಿತವಾಗಿ ಮುಕ್ತಾಯಗೊಳಿಸಲು ಪ್ರಯಾಣಿಕರ ಸಹಕಾರವನ್ನು ಕೋರಿದೆ.

RELATED ARTICLES

Related Articles

TRENDING ARTICLES