Sunday, November 24, 2024

ಶೆಟ್ಟರ್‌ಗೆ IT, ED ಭಯ ತೋರಿಸಿರಬಹುದು: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಸೇರ್ಪಡೆಯಾಗಿರಬಹುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್, ಐಟಿ ಬಿಟಿ ಹಾಗೂ ಜಿಲ್ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಂಶಯ ವ್ಯಕ್ತಪಡಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿರೋಧ ಪಕ್ಷಗಳ ನಾಯಕರನ್ನು ಹಣಿಯಲು ಕೇಂದ್ರದ ನರೇಂದ್ರ ಮೋದಿ ಸರ್ಕಾರ ಐಟಿ, ಇಡಿ, ಸಿಬಿಐಗಳನ್ನು ಅಸ್ತ್ರವಾಗಿ ಬಳಸುತ್ತಿದೆ. ಶೆಟ್ಟರ್ ಅವರನ್ನು ಸೆಳೆಯಲ ಇದೇ ತಂತ್ರ ಅನುಸರಿಸಿರಬಹುದು. ಶೆಟ್ಟರ್ ಅವರನ್ನು ನಮ್ಮ ಪಕ್ಷ ಗೌರವಯುತವಾಗಿಯೇ ನಡೆಸಿಕೊಂಡಿತ್ತು. ಈ ಬಗ್ಗೆ ಅವರೇ ಹೇಳಿಕೆ ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡರೂ ವಿಧಾನಪರಿಷತ್ ಸ್ಥಾನವನ್ನು ನೀಡಲಾಗಿತ್ತು’ ಎಂದರು.

ಇದನ್ನೂ ಓದಿ: ನಟ ದರ್ಶನ್ ಜೊತೆಗಿನ 10 ವರ್ಷದ ಪ್ರೀತಿಪೂರ್ವಕ ಸಂಬಂಧ ಒಪ್ಪಿಕೊಂಡ ಪವಿತ್ರ ಗೌಡ

“ಬಿಜೆಪಿಗೆ ಇಡಿ, ಐಟಿ, ಸಿಬಿಐಗಳೇ ಸ್ಪಾರ್ ಕ್ಯಾಂಪೇನರ್‌ಗಳಾಗಿದ್ದಾರೆ. ಇವುಗಳನ್ನು ಬಿಟ್ಟರೆ ಬಿಜೆಪಿಯವರಿಗೆ ಗತಿ ಇಲ್ಲ- ತಾಕತ್ತಿದ್ದರೆ ವಿರೋಧ ಪಕ್ಷಗಳ ನಾಯಕರ ಮೇಲೆ ಇಡಿ. ಐಟಿಗಳನ್ನು ಭೂ ಬಿಡದೇ ಚುನಾವಣೆ ಎದುರಿಸಲಿ ನೋಡೋಣ’ ಎಂದು ಸವಾಲು ಹಾಕಿದರು. ‘ಎಂಥ ಭ್ರಷ್ಟ ವ್ಯಕ್ತಿಯೇ ಇರಲಿ. ಆತ ಬಿಜೆಪಿ ವಾಷಿಂಗ್ ಮಷಿನ್‌ನಲ್ಲಿ ಹಾದು ಹೋದರೆ ಶುಭ್ರನಾಗುತ್ತಾನೆ” ಎಂದು ವ್ಯಂಗ್ಯವಾಡಿದರು.

 

 

 

RELATED ARTICLES

Related Articles

TRENDING ARTICLES