Friday, November 22, 2024

ಕೇಂದ್ರದಲ್ಲಿ ಕಾಂಗ್ರೆಸ್ ಬಂದರೆ ಇಡೀ ದೇಶದಲ್ಲಿ ಜಾತಿ ಗಣತಿ ಮಾಡಿಸುತ್ತೇವೆ : ಸಿದ್ದರಾಮಯ್ಯ

ಚಿತ್ರದುರ್ಗ : ಕೇಂದ್ರದಲ್ಲಿ ನಮ್ಮ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ದೇಶದಲ್ಲಿ ಜಾತಿ ಗಣತಿ ಮಾಡಿಸುತ್ತೇವೆ ಅಂತ ರಾಹುಲ್ ಗಾಂಧಿ ಘೋಷಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಚಿತ್ರದುರ್ಗದಲ್ಲಿ ನಡೆದ ‘ಶೋಷಿತರ ಜಾಗೃತಿ ಸಮಾವೇಶ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಜಾತಿ ಗಣತಿಯ ಪರವಾಗಿದೆ. ಅಧಿಕಾರ ಇರಲಿ, ಇಲ್ಲದಿರಲಿ ನಾನು ಸದಾಕಾಲ ನಿಮ್ಮ ಪರವಾಗಿ ಇರುತ್ತೇನೆ ಎಂದು ಭರವಸೆ ನೀಡಿದರು.

ಕಾಂತರಾಜ್ ಅವರ ವರದಿಯನ್ನು ಕೆಲವರು ಓದದೆ, ತಿಳಿಯದೆ ವಿರೋಧಿಸುತ್ತಿದ್ದಾರೆ. ನಾವು ಕಾಂತರಾಜ ವರದಿಯನ್ನು ಖಂಡಿತಾ ಸ್ವೀಕರಿಸುತ್ತೇವೆ. ನಂತರ ಅದರಲ್ಲಿ‌ ಸಮಸ್ಯೆಗಳು ಕಂಡುಬಂದರೆ ತಜ್ಞರ ಅಭಿಪ್ರಾಯ ಪಡೆದು ಮುಂದುವರಿಯುತ್ತೇವೆ ಎಂದು ತಿಳಿಸಿದರು.

ಸಂವಿಧಾನ ಮಹನೀಯರ ಆಶಯ ಒಳಗೊಂಡಿದೆ

ಜಾತಿ ಶೋಷಣೆಗೆ ಕೊನೆ ಹಾಡುವ ಉದ್ದೇಶದಿಂದಲೇ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ನೀಡಿದರು. ಸಾಹು ಮಹಾರಾಜ್, ಜ್ಯೋತಿಬಾ ಫುಲೆ, ಬುದ್ದ, ಬಸವಣ್ಣ, ನಾರಾಯಣಗುರು, ನಾಲ್ವಡಿ ಅರಸರು, ವಿವೇಕಾನಂದ, ಕನಕದಾಸರೆಲ್ಲರೂ ಈ ಜಾತಿ ವ್ಯವಸ್ಥೆ ತೊಡೆದು ಹಾಕಲು ಶ್ರಮಿಸಿದರು. ನಮ್ಮ ಸಂವಿಧಾನ ಕೂಡ ಈ ಎಲ್ಲಾ ಮಹನೀಯರ ಆಶಯಗಳನ್ನು ಒಳಗೊಂಡಿದೆ ಎಂದು ಹೇಳಿದರು.

ಸಂವಿಧಾನ ವಿರೋಧಿಗಳಿಗೆ ತಕ್ಕ ಪಾಠ ಕಲಿಸಬೇಕು

ಈ ಕಾರಣಕ್ಕೇ ಪಟ್ಟ ಭದ್ರ ಹಿತಾಸಕ್ತಿಗಳು, ದುಷ್ಟ ಶಕ್ತಿಗಳು ಸಂವಿಧಾನ ಬದಲಾಯಿಸುವ ಮೂಲಕ ಮತ್ತೆ ಶೋಷಣೆ, ಮೌಡ್ಯದ ದರ್ಬಾರ್ ಮುಂದುವರಿಸಲು ಯತ್ನಿಸುತ್ತಿದ್ದಾರೆ. ಒಂದು ಕಡೆ ಸಂವಿಧಾನ ಬದಲಾಯಿಸಲು ಹುನ್ನಾರ ನಡೆಸುತ್ತಿದ್ದಾರೆ, ಮತ್ತೊಂದು ಕಡೆ ನಾಲ್ವಡಿ ಅರಸು ಮತ್ತು ಅಂಬೇಡ್ಕರ್, ಸಾಹು ಮಹಾರಾಜ್ ಪ್ರತಿಪಾದಿಸಿದ ಮೀಸಲಾತಿಯನ್ನೂ ವಿರೋಧಿಸುತ್ತಿದ್ದಾರೆ. ಆದ್ದರಿಂದ ಸಂವಿಧಾನ ವಿರೋಧಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಸಿದ್ದರಾಮಯ್ಯ ಕರೆಕೊಟ್ಟರು.

RELATED ARTICLES

Related Articles

TRENDING ARTICLES