ಚಿಕ್ಕಬಳ್ಳಾಪುರ: ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹೌದು, ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಕುದಪಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.
ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿಡ್ಲಘಟ್ಟ ತಾಲೂಕಿನ ಕುದಪಕುಂಟೆ ಗ್ರಾಮದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಶಾಲೆಗೆ ಅಧಿಕಾರಿಗಳ ತಂಡ ಭೇಟಿ ನೀಡಿದೆ.ತಾಲೂಕಿನ BEO ನರೇಂದ್ರ ಕುಮಾರ್, ಇಓ ಮುನಿರಾಜು, ಸಮಾಜ ಕಲ್ಯಾಣ ಇಲಾಖೆ ಜಗದೀಶ್ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಂದ ಗೌಪ್ಯ ಹೇಳಿಕೆಯನ್ನು ಪಡೆದಿದ್ದಾರೆ.
ಇದನ್ನೂ ಓದಿ:‘ನಮ್ಮ ಮೆಟ್ರೋ’ ಹಳದಿ ಮಾರ್ಗದಲ್ಲಿ ಶೀಘ್ರದಲ್ಲೇ ಪ್ರಾಯೋಗಿಕ ರೈಲು ಸಂಚಾರ
ಪೆನ್ನು ಹಿಡಿಯಬೇಕಿದ್ದ ಮಕ್ಕಳ ಕೈಗೆ ಶಿಕ್ಷಕರು ಪೊರಕೆ ಕೊಟ್ಟು ಶೌಚಾಲಯ ಸ್ವಚ್ಛಗೊಳಿಸಿದ್ದಕ್ಕೆ ಗ್ರಾಮಸ್ಥರು ಕಿಡಿಕಾರಿದ್ದಾರೆ. ಶಾಲೇಲಿ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ವಿಡಿಯೊ ವೈರಲ್ ಆಗುತ್ತಿದ್ದಂತೆ ಪೋಷಕರು ತಿರುಗಿ ಬಿದ್ದಿದ್ದಾರೆ.
ಶಾಲಾ ಮುಖ್ಯ ಶಿಕ್ಷಕಿಯ ವಿರುದ್ಧ ಶಿಸ್ತು ಕ್ರಮಕ್ಕೆ ಪೋಷಕರು ಒತ್ತಾಯಸಿದ್ದಾರೆ. ಪೋಷಕರ ಆಕ್ರೋಶಕ್ಕೆ ಕಾರಣವಾಗುತ್ತಿದ್ದಂತೆ ಬಿಇಒ ನರೇಂದ್ರ ಕುಮಾರ್ ಅವರು ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.