Tuesday, December 3, 2024

ವಿದ್ಯಾರ್ಥಿನಿಗೆ ಗಣಿತ ಹೇಳಿಕೊಟ್ಟ ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಚಾಮರಾಜನಗರ : ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಕೆರೆ ಪರಿಶೀಲನೆಗೆ ತೆರಳುವಾಗ ಚಾಮರಾಜನಗರ ತಾಲೂಕಿನ ಪುಟ್ಟನಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೂ ಭೇಟಿ ಕೊಟ್ಟರು.

ಶಾಲಾ ಮಕ್ಕಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಕಲಿಕೆ ಪ್ರಗತಿ ವೀಕ್ಷಿಸಿದರು. ಇದೇ ವೇಳೆ ವಿದ್ಯಾರ್ಥಿನಿಗೆ ಗಣಿತ ಪಾಠವನ್ನು ಪ್ರೀತಿಯಿಂದ ಹೇಳಿಕೊಟ್ಟರು. ಬಳಿಕ ಬಿಸಿಯೂಟ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಮಕ್ಕಳಿಂದ ಮಾಹಿತಿ ಪಡೆದರು.

ಬಳಿಕ ಚಾಮರಾಜನಗರ ತಾಲೂಕಿನ ವಿವಿಧ ಕೆರೆಗಳಿಗೆ ಭೇಟಿ ನೀಡಿ ಒತ್ತುವರಿ ಸಂಬಂಧ ಸ್ಥಳ ಪರಿಶೀಲನೆ ನಡೆಸಿದರು. ತಾಲೂಕಿನ ಕೋಡಿಮೋಳೆ ಕೆರೆ, ನಾಗವಳ್ಳಿ ಕೆರೆ, ಜ್ಯೋತಿಗೌಡನಪುರ ಕೆರೆ, ಕಾಗಲವಾಡಿ ಕೆರೆ, ಹೊಂಗನೂರು ಕೆರೆ, ಹೊಂಡರಬಾಳು ಕೆರೆ, ಇನ್ನಿತರ ಕೆರೆಗಳನ್ನು ವೀಕ್ಷಿಸಿದರು.

ಒತ್ತುವರಿ ತೆರವುಗೊಳಿಸುವಂತೆ ಸೂಚನೆ

ಕಾವೇರಿ ನೀರಾವರಿ ನಿಗಮ ಹಾಗೂ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಗೆ ಒಳಪಡುವ ಕೆರೆಗಳ ವಿಸ್ತೀರ್ಣ, ಒತ್ತುವರಿಯಾಗಿರುವ ಭಾಗಗಳು, ಕೆರೆಗಳ ಅಭಿವೃದ್ಧಿ ಕುರಿತ ಮಾಹಿತಿಯನ್ನು ಅಧಿಕಾರಿಗಳಿಂದ ಆಯಾ ಸ್ಥಳದಲ್ಲಿಯೇ ಪಡೆದು ಪರಿಶೀಲಿಸಿದರು. ಕೆರೆಗಳಿಗೆ ಹದ್ದುಬಸ್ತು ಮಾಡಿ, ಒತ್ತುವರಿ ತೆರವುಗೊಳಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ಶ್ರೀಧರ, ತಹಶೀಲ್ದಾರ್ ಬಸವರಾಜು, ಭೂ ದಾಖಲೆಗಳ ಉಪ ನಿರ್ದೇಶಕಿ ವಿದ್ಯಾಯಿನಿ, ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ಎಂ.ಬಿ.ಪಾಟೀಲ್ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES