ನವದೆಹಲಿ: ಅರ್ಹ ಮಧ್ಯಮ ವರ್ಗದ ಜನರಿಗಾಗಿ ಮನೆ ಕೊಳ್ಳಲು ಅಥವಾ ಮನೆ ಕಟ್ಟಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ವಸತಿ ಯೋಜನೆ ಜಾರಿಗೆ ತರಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಸುಸ್ಥಿರ ಅಭಿವೃದ್ಧಿ ಮತ್ತು ಉತ್ಪಾದಕತೆ ಹೆಚ್ಚಿಸುವ ಆರ್ಥಿಕತೆಯನ್ನು ಸರ್ಕಾರ ಅಳವಡಿಸಿಕೊಳ್ಳಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. ತಿಂಗಳಿಗೆ 300 ಯೂನಿಟ್‌ಗಳವರೆಗೆ ಒಂದು ಕೋಟಿ ಮನೆಗಳಿಗೆ ಉಚಿತ ವಿದ್ಯುತ್ ಅನ್ನು ಖಚಿತಪಡಿಸಲು ಛಾವಣಿಯಲ್ಲಿ ಸೋಲಾರ್ ವಿದ್ಯುತ್ ಪ್ಯಾನಲ್ ಅಳವಡಿಕ ಬಗ್ಗೆ ಅವರು ಪ್ರಸ್ತಾಪಿಸಿದರು.
ಇದನ್ನೂ ಓದಿ: ನೀಲಿ, ಕೆನೆ ಬಣ್ಣದ ಸೀರೆಯುಟ್ಟು ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ
ಇದಕ್ಕೆ ವಾರ್ಷಿಕವಾಗಿ ₹15,000-18,000 ಕೋಟಿ ವೆಚ್ಚವಾಗಲಿದೆ.