ರಾಮನಗರ: ಕೆಪಿಸಿಸಿ ಅಧ್ಯಕ್ಷ ಹಾಗು ಡಿಸಿಎಂ ಡಿ.ಕೆ.ಶಿವಕುಮಾರ್ ಕ್ಷೇತ್ರದ ಕನಕಪುರ ತಾಲೂಕು ಕಚೇರಿಯಲ್ಲಿ ಚುನಾವಣೆ ಶಾಖಾಧಿಕಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ತಹಸೀಲ್ದಾರ್ ಸ್ಮಿತಾ ರಾಮು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ವೈಜ್ಞಾನಿಕ ಅಕಾಡೆಮಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಿಎಂಗೆ ಮನವಿ!
ಮೃತರನ್ನು ಕನಕಪುರ ಚುನಾವಣೆ ಶಾಖಾಧಿಕಾರಿ ಸುರೇಶ್ (50) ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಆದರೇ, ಮೇಲಧಿಕಾರಿಗಳ ಕಿರುಕುಳದ ಸಂಶಯವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಕನಕಪುರ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳು ಇದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.