ನವದೆಹಲಿ : ಮಾಜಿ ಉಪಪ್ರಧಾನಿ ಎಲ್.ಕೆ ಅಡ್ವಾನಿ ಅವರು ಭಾರತ ರತ್ನ ಪ್ರಶಸ್ತಿ ಭಾಜನರಾಗಿದ್ದಾರೆ. ಇವರಿಗೆ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಶುಭ ಕೋರಿದ್ದಾರೆ.
ಇದನ್ನೂ ಓದಿ: ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಅನ್ಯಾಯ: ಫೆಬ್ರವರಿ 7ಕ್ಕೆ ದೆಹಲಿಯಲ್ಲಿ ಪ್ರತಿಭಟನೆ
ಪ್ರಧಾನಿ ಮೋದಿಯವರು ಎಕ್ಸ್ ಪೋಸ್ಟ್ ನಲ್ಲಿ ಸಂತಸವನ್ನು ಹಂಚಿಕೊಂಡಿದ್ದಾರೆ. ಎಲ್ ಕೆ ಅಡ್ವಾಣಿಯವರಿಗೆ ಭಾರತರತ್ನ ಪ್ರಶಸ್ತಿ ಸಿಗಲಿದೆ ಎನ್ನುವ ಸುದ್ದಿಯನ್ನು ಹಂಚಿಕೊಳ್ಳಲು ತುಂಬ ಸಂತೋಷವಾಗುತ್ತದೆ. ಈಗಾಗಲೇ ಅವರಿಗೆ ಕರೆ ಮಾಡಿ ಶುಭಕೋರಿದ್ದೇನೆ, ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಇವರು ಒಬ್ಬರು, ಭಾರತದ ಅಭಿವೃದ್ದಿಗೆ ಅವರ ಕೊಡುಗೆ ಸ್ಮರಣೀಯ ಎಂದು ಪೋಸ್ಟ್ ಮಾಡಿದ್ದಾರೆ.
ಇತ್ತೀಚೆಗೆ ಬಿಹಾರದ ಸಮಾಜವಾದಿ ಹೋರಾಟಗಾರ, ರಾಜಕಾರಣಿಗೆ ಕರ್ಪೂರಿ ಠಾಕೂರ್ ಅವರಿಗೆ ಭಾರತ ಸರ್ಕಾರ ಮರಣೋತ್ತರವಾಗಿ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಘೋಷಿಸಿತ್ತು, ಇದೀಗ ಹಿರಿಯ ರಾಜಕಾರಣಿ ಎಲ್.ಅಡ್ವಾಣಿಯವರಿಗೆ ಭಾರತರತ್ನ ಘೋಷಿಸಿದೆ.
I am very happy to share that Shri LK Advani Ji will be conferred the Bharat Ratna. I also spoke to him and congratulated him on being conferred this honour. One of the most respected statesmen of our times, his contribution to the development of India is monumental. His is a… pic.twitter.com/Ya78qjJbPK
— Narendra Modi (@narendramodi) February 3, 2024