ಪಂಜಾಬ್ : ಪಂಜಾಬ್ ನ ರಾಜ್ಯಪಾಲರಾದ ಪನ್ವಾರಿ ಲಾಲ್ ಪುರೋಹಿತ್ ಅವರು ತಮ್ಮ ರಾಜ್ಯಪಾಲ ಸ್ಥಾನಕ್ಕೆ ರಾಜಿನಾಮೆಯನ್ನು ಸಲ್ಲಿಸಿದ್ದಾರೆ.
ಈ ಕುರಿತು ಪತ್ರವನ್ನು ಬರೆದಿರುವ ಅವರು, ನಾನು ನನ್ನ ವೈಯಕ್ತಿಕ ಕಾರಣಕ್ಕೆ ಪಂಜಾಬ್ ರಾಜ್ಯದ ರಾಜ್ಯಪಾಲ ಹುದ್ದೆಗೆ ಹಾಗು ಕೇಂದ್ರಾಡಳಿತ ಪ್ರದೇಶ ಚಂಡಿಘಡದ ರಾಜ್ಯಪಾಲ ಸ್ಥಾನಕ್ಕೆ ರಾಜಿನಾಮೆಯನ್ನು ಸಲ್ಲಿಸುತ್ತಿದ್ದೇನೆ ನನ್ನ ರಾಜೀನಾಮೆಯನ್ನು ಸ್ವೀಕರಿಸಿ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಹಿರಿಯ ರಾಜಕಾರಣಿ ಎಲ್.ಕೆ ಅಡ್ವಾಣಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿದ ಸರ್ಕಾರ!
ಪಂಜಾಬ್ ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷ ಆಡಳಿತವನ್ನು ನಡೆಸುತ್ತಿದ್ದು ಮುಖ್ಯಮಂತ್ರಿಗಳಾಗಿ ಭಗವಂತ್ ಮಾನ್ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಈ ನಡುವೆ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ತಮ್ಮ ರಾಜ್ಯಪಾಲ ಸ್ಥಾನಕ್ಕೆ ರಾಜಿನಾಮೆಯನ್ನು ನೀಡಿದ್ದಾರೆ.
#Punjab Governor Banwarilal Purohit resigns. pic.twitter.com/EAqSS8j808
— Jagtar Singh (@jagtar201) February 3, 2024