ಬೆಂಗಳೂರು: ರಾಜ್ಯ ಬಜೆಟ್‌ಗೂ ಮುನ್ನ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರೈತರು ಮುಂದಾಗಿದ್ದಾರೆ. ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ಬೆಂಗಳೂರು ಚಲೋಗೆ ಕರೆ ನೀಡಲಾಗಿದೆ.
ನಾಳೆ ಬೆಂಗಳೂರು ಚಲೋಗೆ ರೈತ ಸಂಘಟನೆ ಕರೆ ನೀಡಿದೆ. ರೈತ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರಾಜ್ಯ ರೈತ ಒಕ್ಕೂಟದಿಂದ ಬೆಂಗಳೂರು ಚಲೋಗೆ ಕರೆ ನೀಡಲಾಗಿದೆ. ಬಜೆಟ್ನಲ್ಲಿ ರೈತರ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದೆ.
ಇದನ್ನೂ ಓದಿ: ನಾಳೆ ಬೆಂಗಳೂರು ಚಲೋಗೆ ರೈತ ಸಂಘಟನೆ ಕರೆ
ತೆಲಂಗಾಣ ಕಾಂಗ್ರೆಸ್ ಸರ್ಕಾರದಂತೆ ರಾಜ್ಯದಲ್ಲೂ ರೈತರ ಸಾಲ ಮನ್ನಾ ಮಾಡಬೇಕು. ರೈತರ ಎಲ್ಲಾ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಬೇಕು. ಬರಗಾಲ ಪೀಡಿತ ರೈತರಿಗೆ ಎಕರೆಗೆ ಕನಿಷ್ಠ 25 ಸಾವಿರ ಪರಿಹಾರ ಕೊಡಬೇಕು. ಕೃಷಿಗೆ ಬಳಸುವ ಉಪಕರಣಗಳ ಬಿಡಿಬಾಗಕ್ಕೆ ಜಿಎಸ್‌ಟಿ ವಿನಾಯಿತಿ ನೀಡುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಒತ್ತಾಯ ಮಾಡಬೇಕು. ಇನ್ನು ಹಲವು ಬೇಡಿಕೆ ಮುಂದಿಟ್ಟು ಬೆಂಗಳೂರು ಚಲೋಗೆ ರೈತ ಒಕ್ಕೂಟ ಕರೆ ನೀಡಿದೆ.
ಈ ಬೆಂಗಳೂರು ಚಲೋ ಕಾರ್ಯಕ್ರಮದಲ್ಲಿ ರಾಜ್ಯಾದ್ಯಂತ ಸುಮಾರು 30ಸಾವಿರಕ್ಕೂ ಹೆಚ್ಚು ರೈತರು ಭಾಗಿಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.