Sunday, November 24, 2024

ಭಾರತೀಯ ಹಾಕಿ ಆಟಗಾರನ ಮೇಲೆ ಪೋಕ್ಸೊ ಪ್ರಕರಣ ದಾಖಲು

ಬೆಂಗಳೂರು: ಭಾರತೀಯ ಹಾಕಿ ತಂಡದ ಸದಸ್ಯನೊಬ್ಬನ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದೆ.

ಹೌದು,ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಯಾರು ಈ ಆಟಗಾರ?
ಆರೋಪಿಯು ಭಾರತೀಯ ಹಾಕಿ ತಂಡದ ಡಿಫೆಂಡರ್ ವರುಣ್ ಕುಮಾರ್ ಎಂದು ತಿಳಿದು ಬಂದಿದೆ.

ಮದುವೆಯಾಗೋದಾಗಿ ನಂಬಿಸಿ ವಂಚನೆ

ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿರುವ ಆರೋಪ ಕೇಳಿ ಬಂದಿದೆ.ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದಾಗ ಯುವತಿಯೊಬ್ಬಳು ವರುಣ್ ಕುಮಾರ್​​ಗೆ ಪರಿಚಯವಾಗಿದ್ದಳು. ಯುವತಿಗೆ 16 ವರ್ಷವಿದ್ದಾಗ ಪ್ರೀತಿ ಮಾಡಿದ್ದ. ಜೊತೆಗೆ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಕೂಡ ಮಾಡಿದ್ದ ಎಂದು ತಿಳಿದು ಬಂದಿದೆ.

ಇದಲ್ಲದೇ 2019ರಿಂದ ಯುವತಿ ಜೊತೆಗೆ ಸಂಪರ್ಕದಲ್ಲಿದ್ದ. ಈಗ ಮದುವೆಯಾಗದೇ ವಂಚಿಸಿರುವ ಹಿನ್ನೆಲೆ, ಆರೋಪಿಯ ಮೇಲೆ ಎಫ್ಐಆರ್ ದಾಖಲಾಗಿದೆ.

ಮೂಲತಃ ಹಿಮಾಚಲ ಪ್ರದೇಶದವನಾಗಿದ್ದು,2017ರಲ್ಲಿ‌ ಭಾರತ ತಂಡದ ಪರ ಹಾಕಿ ಆಟಕ್ಕೆ ಪಾದಾರ್ಪಣೆ ಮಾಡಿದ್ದ ವರುಣ್ ಕುಮಾರ್ ಹಾಕಿ ಇಂಡಿಯಾ ಲೀಗ್ ಪಂಜಾಬ್ ವಾರಿಯರ್ ತಂಡವನ್ನು ಪ್ರತಿನಿಧಿಸಿ ಹಲವು ರಾಷ್ಟ್ರಮಟ್ಟ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ಹಾಕಿ ತಂಡದಲ್ಲಿ ಆಡಿದ್ದಾರೆ.

2020 ರ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕದ ಸಾಧನೆಗೆ ಹಿಮಾಚಲ ಪ್ರದೇಶ ಸರ್ಕಾರ ವರುಣ್ ಕುಮಾರ್‌ಗೆ  1 ಕೋಟಿ ಬಹುಮಾನ ಘೋಷಿಸಿತ್ತು. 2021 ನೇ ಸಾಲಿನ ಅರ್ಜುನ ಪ್ರಶಸ್ತಿಗೂ ಭಾಜನರಾಗಿದ್ದರು. 2022ರ ಬರ್ಮಿಂಗ್ ಹ್ಯಾಂ – ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ, 2022 ರ ಏಷ್ಯನ್ ಗೇಮ್ಸ್‌ ನಲ್ಲಿ ಚಿನ್ನ ಗೆದ್ದ ತಂಡದಲ್ಲಿದ್ದರು. ಇಂತಹ ಉದಯೋನ್ಮುಖ ಹಾಕಿ ಆಟಗಾರನ ವಿರುದ್ಧ ಇದೀಗ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಸದ್ಯ ಆರೋಪಿ ವರುಣ್ ಕುಮಾರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES