Saturday, November 23, 2024

ಪ್ರೇಮಿಗಳ ದಿನ ಫೆಬ್ರವರಿ 14 ರಿಂದ 17 ರವರೆಗೆ ಮದ್ಯ ಮಾರಾಟ ನಿಷೇಧ!

ಬೆಂಗಳೂರು: ಈ ಬಾರಿಯ ಪ್ರೇಮಿಗಳ ದಿನದ ಸಂಭ್ರಮಕ್ಕೆ ಕಾನೂನು ತೊಡಕುಂಟಾಗಲಿದೆ. ಫೆಬ್ರವರಿ 14ರ ಸಂಜೆ 5 ಗಂಟೆಯಿಂದ ಫೆಬ್ರವರಿ 17 ಬೆಳಗ್ಗೆ 6. ಗಂಟೆವರೆಗೆ ಬೆಂಗಳೂರು ಮಹಾ ನಗರದ ಹಲವೆಡೆ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಪ್ರೇಮಿಗಳ ದಿನ ಆಚರಿಸಲಾಗುವ ಫೆಬ್ರವರಿ 14ರಂದೇ ಮದ್ಯ ಮಾರಾಟಕ್ಕೆ ನಿರ್ಬಂಧ ಜಾರಿಯಾಗಲಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಉಪ ಚುನಾವಣೆ ಇರುವ ಕಾರಣ ಫೆಬ್ರವರಿ 16 ರಿಂದ ಬೆಂಗಳೂರಿನಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ಜಾರಿಯಲ್ಲಿ ಇರಲಿದೆ. ಪೊಲೀಸ್ ಕಮಿಷನರೇಟ್ ವ್ಯಾಪ್ತಿಗೆ ಹೊರತಾದ ಪ್ರದೇಶಗಳಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ಇರಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನು ಓದಿ: ರಾಜ್ಯದ ಅನ್ಯಾಯ ಸರಿಪಡಿಸುವ ಅಧಿಕಾರ ಕೇಂದ್ರಕ್ಕಿಲ್ಲವಾದರೆ ಆ ಸರ್ಕಾರ ಯಾಕಿರಬೇಕು!

1951ರ ಪ್ರಜಾ ಪ್ರತಿನಿಧಿ ಕಾಯ್ದೆಯ ಸೆಕ್ಷನ್ 135 (ಸಿ) ಹಾಗೂ 1967ರ ಕರ್ನಾಟಕ ಅಬಕಾರಿ ಕಾಯ್ದೆಯ ನಿಯಮ 10 (ಬಿ) ಅಡಿಯಲ್ಲಿ ಈ ನಿರ್ಬಂಧ ಜಾರಿಗೆ ತರಲಾಗಿದೆ ಎಂದು ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತ ಕೆ. ಎ. ದಯಾನಂದ ಅವರು ಮಾಹಿತಿ ನೀಡಿದ್ಧಾರೆ.

ಈ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಮತದಾರರು ಭಾಗಿಯಾಗಲಿದ್ದಾರೆ. ಯಲಹಂಕ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹದೇವಪುರ, ಬೆಂಗಳೂರು ದಕ್ಷಿಣ ಹಾಗೂ ಆನೇಕಲ್ ಕ್ಷೇತ್ರಗಳ ಮತದಾರರು ಮತ ಚಲಾವಣೆ ಮಾಡಲಿದ್ದಾರೆ. ಹೀಗಾಗಿ ಈ ಎಲ್ಲಾ ಕ್ಷೇತ್ರಗಳಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಫೆಬ್ರವರಿ 23ರವರೆಗೆ ಜಾರಿಯಲ್ಲಿ ಇರಲಿದೆ. ಮದ್ಯ ಮಾರಾಟ ನಿರ್ಬಂಧ ಕೂಡಾ ಈ ಕ್ಷೇತ್ರಗಳಲ್ಲಿ ಜಾರಿಯಲ್ಲಿ ಇರಲಿದೆ.

ಇನ್ನು ಮದ್ಯ ಮಾರಾಟಕ್ಕೂ ಪ್ರೇಮಿಗಳ ದಿನಕ್ಕೂ ಯಾವುದೇ ಸಂಬಂಧ ಇಲ್ಲ. ಇದು ಕೇವಲ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಪ್ರಕಾರ ಕೈಗೊಂಡ ನಿರ್ಬಂಧವಾಗಿದೆ.

RELATED ARTICLES

Related Articles

TRENDING ARTICLES