ಮಂಡ್ಯ: ಕೆರಗೋಡು ಹನುಮಧ್ವಜ ತೆರವು ವಿವಾದ ಹಿನ್ನೆಲೆ ಇಂದು ಮಂಡ್ಯ ಬಂದ್ ಗೆ ಕರೆ ನೀಡಲಾಗಿದೆ. ಭಜರಂಗದಳ, ವಿಶ್ವ ಹಿಂದೂ ಪರಿಷತ್ ಹಾಗೂ ಶ್ರೀರಾಮ ಭಜನಾ ಮಂಡಳಿಯಿಂದ ಬಂದ್ಗೆ ಕರೆ ನೀಡಲಾಗಿದ್ದು, ಬೆಳಗ್ಗೆಯಿಂದಲೇ ಅಂಗಡಿ ಮುಗ್ಗಟ್ಟುಗಳು ಬಂದ್ ಆಗಿದೆ, ಜನರ ಓಡಾಟ ವಿರಳವಾಗಿದೆ.
ಸರ್ಕಾರಿ ಬಸ್‌ಗಳ ಓಡಾಟ ಇದ್ದರೂ ಇತರೆ ವಾಹನಗಳ ಸಂಚಾರ ಸ್ತಬ್ಧವಾಗಿದೆ. ಕೆರಗೋಡಿನಿಂದ ಮಂಡ್ಯದವರೆಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಬೈಕ್ ರ್ಯಾಲಿ ಹಮ್ಮಿಕೊಂಡಿದ್ದಾರೆ. ಈ ರ್ಯಾಲಿಯಲ್ಲಿ ಬಿಜೆಪಿ ಕಾರ್ಯಕರ್ತರು ಕೂಡ ಭಾಗಿಯಾಗಿದ್ದಾರೆ. ಬಂದ್ ಹಿನ್ನೆಲೆಯಲ್ಲಿ ಮಂಡ್ಯ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಇದನ್ನೂ ಓದಿ: Eiffel Tower: ಫ್ರಾನ್ಸ್‌ನ ಐಫೆಲ್ ಟವರ್‌ನಲ್ಲಿ UPI ಸೌಲಭ್ಯ!
ಹಿಂದೂ ಸಂಘಟನೆಗಳು ಇಂದು ಮಂಡ್ಯ ಬಂದ್ಗೆ ಕರೆ ಹಿನ್ನಲೆ ಮಂಡ್ಯ ಶಾಸಕ ಗಣಿಗ ರವಿಕುಮಾರ್ ಗೌಡ ಮನೆಗೆ ಪೋಲಿಸ್ ಭದ್ರತೆ ಒದಗಿಸಿದೆ. ಮಂಡ್ಯ ನಗರದ ಬಂದಿಗೌಡ ಬಡಾವಣೆಯಲ್ಲಿರುವ ಶಾಸಕ ರವಿಕುಮಾರ್ ಗೌಡ ನಿವಾಸಕ್ಕೆ ಭಾರೀ ಭದ್ರತೆ ಒದಗಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ 10 ಜನ ಪೋಲಿಸರು ಶಾಸಕರ ಮನೆಗೆ ಭದ್ರತೆ ನೀಡಲಾಗಿದೆ.
ಮಂಡ್ಯ ಬಂದ್ ಗೆ ಪೊಲೀಸ್ ಹೈ ಅಲರ್ಟ್ :
ಮಂಡ್ಯ ಬಂದ್ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮಂಡ್ಯ ನಗರದಾದ್ಯಂತ ಪೊಲೀಸ್ ಹೈ ಅಲರ್ಟ್ ಷೋಷಿಸಿದೆ. 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಪ್ರಮುಖ ರಸ್ತೆ, ವೃತ್ತಗಳಲ್ಲಿ ಖಾಕಿ ಕಣ್ಗಾವಲು ಹಾಕಲಾಗಿದೆ. ಪ್ರತಿಭಟನಾಕಾರರು ಜಮಾವಣೆಗೊಳ್ಳುವ ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ನಿಯೋಜನೆ ಮಾಡಲಾಗಿದೆ.
ರೈಲ್ವೆ ನಿಲ್ದಾಣದ ಆಂಜನೇಯ ಸ್ವಾಮಿ ದೇವಸ್ಥಾನ, ಮಹಾವೀರ ವೃತ್ತ, ಸಂಜಯ ವೃತ್ತ, ಜಿಲ್ಲಾಧಿಕಾರಿ ಕಚೇರಿ ಬಳಿ ಪೊಲೀಸ್ ಭದ್ರತೆ ನೀಡಲಾಗಿದೆ. ಬಂದ್ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಓರ್ವ SP, 8 DYSP, 25 ಸರ್ಕಲ್ ಇನ್ಸ್ ಪೆಕ್ಟರ್, 40 ಪಿಎಸ್ ಐ ಸೇರಿದಂತೆ 600 ಕ್ಕೂ ಹೆಚ್ಚು ಪೋಲಿಸರ ನಿಯೋಜನೆ ಮಾಡಲಾಗಿದೆ.