Thursday, September 19, 2024

Namma Metro: ಫೆ.11ರಂದು 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ

ಬೆಂಗಳೂರು: ಟ್ರಿನಿಟಿ ಮತ್ತು ಎಂ.ಜಿ ರಸ್ತೆ ನಿಲ್ದಾಣಗಳ ನಡುವೆ ಭಾನುವಾರ ಎರಡೂ ಗಂಟೆ ನಮ್ಮ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ.

ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎಂ.ಜಿ. ರಸ್ತೆ ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ಭಾನುವಾರ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಎರಡು ಗಂಟೆಗಳವರೆಗೆ ಮೆಟ್ರೋ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಈ ಬಗ್ಗೆ ಬಿಎಂಆರ್​ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಈ ಅವಧಿಯಲ್ಲಿ ರೈಲುಗಳು ಎಂ.ಜಿ ರಸ್ತೆ ಮತ್ತು ಚಲ್ಲಘಟ್ಟ ಹಾಗೂ ಇಂದಿರಾನಗರ, ವೈಟ್‌ಫೀಲ್ಡ್ (ಕಾಡುಗೋಡಿ) ನಡುವೆ ಮಾತ್ರ ನಮ್ಮ ಮೆಟ್ರೋ ಬೆಳಗ್ಗೆ  7 ಗಂಟೆಯಿಂದ ಎಂದಿನಂತೆ ಸಂಚರಿಸು್ತತವೆ.ಆದ್ರೆ, ಬೆಳಗ್ಗೆ 9 ಗಂಟೆಯ ನಂತರ ವೈಟ್‌ ಫೀಲ್ಡ್ (ಕಾಡುಗೋಡಿ) ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವಿನ ಸಂಪೂರ್ಣ ನೇರಳೆ ಮಾರ್ಗದಲ್ಲಿ ವೇಳಾಪಟ್ಟಿಯಂತೆ ಮೆಟ್ರೋ ರೈಲು ಸೇವೆಗಳು ಲಭ್ಯವಿರುತ್ತವೆ.

ಇನ್ನು ಹಸಿರು ಮಾರ್ಗದಲ್ಲಿ ರೈಲುಗಳ ಸೇವೆ ಆಯಾ ಟರ್ಮಿನಲ್ ನಿಲ್ದಾಣಗಳಿಂದ ವೇಳಾಪಟ್ಟಿಯ ಪ್ರಕಾರ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗಿ ಎಂದಿನಂತೆ ಚಲಿಸುತ್ತವೆ ಎಂದು ಬಿಎಂಆರ್​ಸಿಎಲ್​ ಮಾಧ್ಯಮ ಪ್ರಕಟಣೆ ಹೊರಡಿಸಿದೆ.ಫೆ.11ರಂದು 2 ಗಂಟೆ ಮೆಟ್ರೋ ಸಂಚಾರ ಇರಲ್ಲ

RELATED ARTICLES

Related Articles

TRENDING ARTICLES