ಬೆಂಗಳೂರು: ಜಮ್ಮು ಕಾಶ್ಮೀರದ ಪುಲ್ವಾಮ ಬಳಿ ಉಗ್ರರ ದಾಳಿಗೆ ಬಲಿಯಾದ 44 ಮಂದಿ ಸಿಆರ್ಪಿಎಫ್ ಉತಾತ್ಮ ಯೋಧರಿಗೆ ಫೆ.14 ರಂದು ಬುಧವಾರ 5ನೇ ವರ್ಷದ ಶ್ರದ್ದಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಕೇಂದ್ರೀಯ ಅರೆ ಸೇನಾ ಪಡೆಗಳ ಮಾಜಿ ಯೋಧರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಯಲಹಂಕಾದ ಸಿಆರ್ಪಿಎಫ್ ಪರೇಡ್ ಮೈದಾನದಲ್ಲಿ 5 ನೇ ವರ್ಷದ ಶ್ರದ್ದಾಂಜಲಿ ಕಾರ್ಯಕ್ರಮ ನಡೆಯಲಿದೆ. ಹುತಾತ್ಮರಾದ 44 ಮಂದಿ ವೀರ ಯೋಧರಿಗೆ ಶ್ರದ್ದಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ದಿನ ಭವಿಷ್ಯ: ವಿನಾಯಕನ ವಿಶೇಷ ಕೃಪೆ ಈ ರಾಶಿಯವರ ಮೇಲೆ ಇರಲಿದೆ!
2019, ಫೆ. 14 ರಂದು ಕಾಶ್ಮೀರದ ಬಳಿ ಇರುವ ಪುಲ್ವಾಮದಲ್ಲಿ ಕಾರ್ಯನಿರತರಾಗಿ ಬೆಂಗಾವಲು ಪಡೆಗಳ ವಾಹನದಲ್ಲಿ ತೆರಳುತ್ತಿದ್ದ ವಾಹನಗಳ ಮೇಲೆ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಲ್ಲಿ 44 ಮಂದಿ ಅರೆಸೇನಾ ಪಡೆಯ ಸಿಆರ್ಪಿಎಫ್ ಯೋಧರು ಹುತಾತ್ಮರಾದರು. ಇವರ ಸ್ಮರಣಾರ್ಥ ಕೇಂದ್ರೀಯ ಅರೆಸೇನಾ ಪಡೆಗಳ ಮಾಜಿ ಯೋಧರಿಂದ ಶ್ರದ್ದಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗು ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.