ಹೊಸದಿಲ್ಲಿ: ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನ ಅನರ್ಹಗೊಳಿಸಿ ರಾಜ್ಯ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ದ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ಇಂದು ನಡೆಯಲಿದೆ.
ಈ ಹಿಂದೆ ರಾಜ್ಯ ಹೈಕೋರ್ಟ್ ಪ್ರಜ್ವಲ್ ರೇವಣ್ಣ ಅವರನ್ನು ಸದಸ್ಯತ್ವದಿಂದ ಅನರ್ಹಗೊಳಿಸಿದ್ದು, ಈ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿತ್ತು. ಸದ್ಯ ಈ ಪ್ರಕರಣವು ನ್ಯಾ.ಸೂರ್ಯಕಾಂತ್ ಅವರ ನೇತೃತ್ವದ ದ್ವಿಸದಸ್ಯ ಪೀಠದ ಮುಂದೆ ವಿಚಾರಣೆ ನಡೆಯಲಿದೆ.
ಇದನ್ನೂ ಓದಿ: ‘ದಿಲ್ಲಿ ಚಲೋ’ ಹೋರಾಟ; ದೆಹಲಿಯಲ್ಲಿ 1 ತಿಂಗಳು ನಿಷೇಧಾಜ್ಞೆ!
2019ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಸಲ್ಲಿಸಲಾದ ತಮ್ಮ ಅಫಿಡವಿಟ್‌ನಲ್ಲಿ ಸುಳ್ಳು ದಾಖಲೆ ಸಲ್ಲಿಸಿದ, ಹಾಗೂ ಚುನಾವಣಾ ಅಕ್ರಮಗಳ ಆರೋಪದ ಮೇಲೆ ಜನತಾ ದಳ (ಜಾತ್ಯತೀತ) ನಾಯಕ ಪ್ರಜ್ವಲ್ ರೇವಣ್ಣ ಅವರನ್ನು ಕರ್ನಾಟಕ ಹೈಕೋರ್ಟ್ ಹಾಸನ ಜಿಲ್ಲೆಯ ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ ನ ಏಕ ಪೀಠದ ನ್ಯಾಯಾಧೀಶ ಕೆ.ನಟರಾಜನ್ ಅವರು ಈ ತೀರ್ಪು ನೀಡಿದ್ದರು.