ಬೆಂಗಳೂರು : 2024ನೇ ಸಾಲಿನ ಮುಖ್ಯ ಜಂಟಿ ಪ್ರವೇಶ ಪರೀಕ್ಷೆ ಜೆಇಇಯ ಫಲಿತಾಂಶವನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ ಇಂದು ಪ್ರಕಟಿಸಿದೆ.
ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಲ್ಲಿ 23 ಅಭ್ಯರ್ಥಿಗಳು 100ಕ್ಕೆ 100 ಅಂಕಗಳನ್ನು ಗಳಿಸಿದ್ದಾರೆ. ಇವರಲ್ಲಿ ತೆಲಂಗಾಣದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
ಮುಖ್ಯ ಪರೀಕ್ಷೆಯ ಮೊದಲ ಆವೃತ್ತಿಯಲ್ಲಿ 11.70 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು. ಇವರಲ್ಲಿ ತೆಲಂಗಾಣದ 7, ಹರಿಯಾಣದ ಇಬ್ಬರು, ಆಂಧ್ರಪ್ರದೇಶ,ರಾಜಸ್ಥಾನ ಮತ್ತು ಮಹಾರಾಷ್ಟ್ರದ ತಲಾ ಮೂವರು, ದೆಹಲಿಯ ಇಬ್ಬರು, ಗುಜರಾತ್, ಕರ್ನಾಟಕ ಮತ್ತು ತಮಿಳುನಾಡಿನ ತಲಾ ಒಬ್ಬರು ಪೂರ್ಣ ಅಂಕ ಪಡೆದಿದ್ದಾರೆ.
ಈ ಸುದ್ದಿ ಓದಿದ್ದೀರಾ? : ಮಾ.25 ರಿಂದ ಏ.6ರವರೆಗೆ SSLC ಪರೀಕ್ಷೆ : ಯಾವ ದಿನ ಯಾವ ಎಕ್ಸಾಂ?
ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಮತ್ತು ಮೇಲ್ವಿಚಾರಣೆ ಮಾಡಲು ಕೇಂದ್ರ ನಿಯಂತ್ರಣ ಕೊಠಡಿಯನ್ನು ತೆರೆಯಲಾಗಿತ್ತು. ಜೆಇಇ-ಮೇನ್ಸ್ ಪೇಪರ್ 1 ಮತ್ತು ಪೇಪರ್ 2ರ ಫಲಿತಾಂಶಗಳ ಆಧಾರದ ಮೇಲೆ, ಅಭ್ಯರ್ಥಿಗಳು ಜೆಇಇ-ಅಡ್ವಾನ್ಸ್ಡ್ ಪರೀಕ್ಷೆಗೆ ಹಾಜರಾಗಲು ಅರ್ಹತೆ ಗಿಟ್ಟಿಸಿಕೊಳ್ಳಲಿದ್ದಾರೆ. ಈ ಪರೀಕ್ಷೆಯು ದೇಶದ 23 ಪ್ರಮುಖ ಭಾರತೀಯ ತಂತ್ರಜ್ಞಾನ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಇರುವ ಒಂದು ಮಾನದಂಡವಾಗಿದೆ.