ಬೆಂಗಳೂರು : ಸದನದಲ್ಲಿ ‘ಏನಿಲ್ಲ, ನಿನ್ನ ನನ್ನ ನಡುವೆ ಏನಿಲ್ಲ, ಏನೇನಿಲ್ಲ’ ಹಾಡು ಸದ್ದು ಮಾಡಿದೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ವೇಳೆ ವಿಪಕ್ಷ ನಾಯಕ ಆರ್. ಅಶೋಕ್ ವೈರಲ್ ಹಾಡಿನ ಬಗ್ಗೆ ಪ್ರಸ್ತಾಪ ಮಾಡಿ ಕಾಂಗ್ರೆಸ್ ಪಕ್ಷವನ್ನು ಲೇವಡಿ ಮಾಡಿದ್ದಾರೆ.
ಈ ಕಾಂಗ್ರೆಸ್ ಸರ್ಕಾರ ಕೆಟ್ಟು ನಿಂತು ಹೋಗಿರುವ ಬಸ್ ಇದ್ದಹಾಗೆ. ಇದೀಗ ಒಂದು ಹಾಡು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಾಂಗ್ರೆಸ್ ಸರ್ಕಾರದ ಬಗ್ಗೆಯೂ ಹಾಡು ಕೂಡ ಹಾಕಿದ್ದಾರೆ. ಸರ್ಕಾರದಲ್ಲಿ ಹಣವಿಲ್ಲ, ಸತ್ತು ಹೋಗಿದೆ ಎಂದು ಕುಟುಕಿದರು.
ಅದೇ ರೀತಿ ‘ಏನಿಲ್ಲ, ನಿನ್ನ ನನ್ನ ನಡುವೆ ಏನಿಲ್ಲ, ಏನೇನಿಲ್ಲ..’ ಈ ಸರ್ಕಾರದಲ್ಲಿ ಏನೂ ಇಲ್ಲ. ಈ ರೀತಿ ಸರ್ಕಾರದಲ್ಲಿ ಯಾವುದೇ ಕೆಲಸ ಏನು ಇಲ್ಲ. ಸರ್ಕಾರ ಸರಿಯಾದ ದಾರಿಯಲ್ಲಿ ನಡೆಯುತ್ತಿಲ್ಲ. ಮುಂದೆ ಹೋಗುತ್ತದೆಯೋ? ಇಲ್ಲವೋ? ಎಂಬ ಗ್ಯಾರಂಟಿ ಇಲ್ಲ ಎಂದು ಹಾಡಿನ ಮೂಲಕ ವ್ಯಂಗ್ಯವಾಡಿದ್ದಾರೆ.