ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿರುವ 15ನೇ ಆಯವ್ಯಯದಲ್ಲಿ ರಾಜಧಾನಿ ಬೆಂಗಳೂರಿಗೆ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ. ಬೆಂಗಳೂರು ಸುರಂಗ ಮಾರ್ಗ, ಮೆಟ್ರೋ ಸೇವೆ, ಬಿಎಂಟಿಸಿ ಬಸ್ ಸೇರಿ ಹತ್ತು ಹಲವು ಕೊಡುಗೆಗಳನ್ನು ಬೆಂಗಳೂರಿನ ಅಭಿವೃದ್ಧಿಗಾಗಿ ಘೋಷಣೆ ಮಾಡಲಾಗಿದೆ.
ಬೆಂಗಳೂರಿಗೆ ಬಜೆಟ್ನಲ್ಲಿ ಸಿಕ್ಕಿದ್ದೇನು?
- ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 20 ಲಕ್ಷ ಆಸ್ತಿಗಳ ಆಸ್ತಿ ತೆರಿಗೆ ದಾಖಲೆಗಳನ್ನು ಡಿಜಿಟಲೀಕರಣ
- 2024 – 25 ನೇ ಮಾಲೀಕರಿಗೆ ಡಿಜಿಟಲ್ ಇ-ಖಾತಾ ಮತ್ತು ಆಸ್ತಿ ತೆರಿಗೆ ಪಾವತಿ ವಿವರಗಳು ಲಭ್ಯ
- ನಗರದ ಪ್ರಮುಖ ರಸ್ತೆಗಳಲ್ಲಿ 147 ಕಿ.ಮೀ ಉದ್ದದ ವೈಟ್ ಟಾಪಿಂಗ್ ಕಾಮಗಾರಿ
- 1,700 ಕೋಟಿ ರೂ. ವೆಚ್ಚದಲ್ಲಿ ವೈಟ್ ಟ್ಯಾಪಿಂಗ್ ಕಾಮಗಾರಿಗಳು ಡಿಸೆಂಬರ್ 2025 ರೊಳಗೆ ಪೂರ್ಣ
- ಬೆಂಗಳೂರಿನಲ್ಲಿ ಸುರಂಗ ಮಾರ್ಗ (Tunnel) ನಿರ್ಮಿಸುವ ಮೂಲಕ ನಗರದಲ್ಲಿ ಸಂಚಾರ ದಟ್ಟಣೆಯನ್ನು ಬಗೆಹರಿಸಲು ನಿರ್ಧಾರ
- ಹೆಬ್ಬಾಳ ಜಂಕ್ಷನ್ ನಲ್ಲಿ ಪ್ರಾಯೋಗಿಕವಾಗಿ ಟನೆಲ್ ನಿರ್ಮಾಣ
- ರಾಜಕಾಲುವೆ ನಾಲೆಗಳ ಬಫರ್ ವಲಯದೊಳಗೆ ನಾಲಾ ಬಫರ್ ನ್ನು ನಿರ್ಮಾಣ ಬಳಸಿಕೊಂಡು ಸರ್ವಋತು ರಸ್ತೆಗಳನ್ನು ನಿರ್ಮಾಣ
- 200 ಕೋಟಿ ರೂ. ಅಂದಾಜು ವೆಚ್ಚದಲ್ಲಿ 100 ಕಿ.ಮೀ. ಉದ್ದದ ಬಫರ್ ರಸ್ತೆ
- ಪ್ರಸಕ್ತ ಸಾಲಿನಲ್ಲಿ 100 ಕಿ.ಮೀ. ಉದ್ದದ ರಸ್ತೆಯನ್ನು ಅಭಿವೃದ್ಧಿ
- ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಕಡಿಮೆಗೊಳಿಸಲು ಪೆರಿಫೆರಲ್ ರಿಂಗ್ ರೋಡ್
- ಬೆಂಗಳೂರು ಬಿಸಿನೆಸ್ ಕಾರಿಡಾರ್ ಎಂಬ ಹೊಸ ಪರಿಕಲ್ಪನೆಯಲ್ಲಿ 73 ಕಿ.ಮೀ. ಉದ್ದದ ರಸ್ತೆ
- 27,000 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ನಿರ್ಮಾಣ
- ಬೆಂಗಳೂರು ನಗರದಲ್ಲಿ 250 ಮೀಟರ್ ಎತ್ತರದ ಸೈ-ಡೆಕ್ (Sky-Deck) ನಿರ್ಮಾಣ
- BBMP. BMRCL BWSSB, BDA ಗಳ ವ್ಯಾಪ್ತಿಯಲ್ಲಿ ವಿದ್ಯುತ್ ಶುಲ್ಕ ಪಾವತಿಯ ಆರ್ಥಿಕ ಹೊರೆ ಕಡಿಮೆಗೊಳಿಸಲು ಸೋಲಾರ್ ಪಾರ್ಕ್ ನಿರ್ಮಾಣ
- ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ ಸೇವೆಯೊಂದಿಗೆ ಮೆಟ್ರೋ ರೈಲು ಹಾಗೂ ಸಬ್-ಅರ್ಬನ್ ರೈಲು ಯೋಜನೆಗಳು ಸೇರಿ ಬಹುವಿಧ ಸಾರಿಗೆ ವ್ಯವಸ್ಥೆಗಳ ಒಗ್ಗೂಡಿಸುವಿಕೆ
- ಬೆಂಗಳೂರಿನಲ್ಲಿ 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣಕ್ಕೆ ನಿರ್ಧರಿಸಲಾಗಿದ್ದು, ಬೆಂಗಳೂರಿನಲ್ಲಿ ಆಕರ್ಷಕ ಪ್ರವಾಸಿ ತಾಣ ನಿರ್ಮಾಣಕ್ಕೆ ಯೋಜನೆ ಮಾಡಲಾಗಿದೆ. ನಗರಾಭಿವೃದ್ಧಿ ಅಂಗಸಂಸ್ಥೆ ಬಿಬಿಎಂಪಿ, ಬಿಎಂಆರ್‌ಸಿಎಲ್, ಬಿಡಬ್ಲ್ಯುಎಸ್‌ಎಸ್‌ಬಿ, ಬಿಡಿಎನಲ್ಲಿ ಸೋಲಾರ್ ಪಾರ್ಕ್ ನಿರ್ಮಾಣ
- 2025ರೊಳಗೆ ಹೊಸದಾಗಿ 44 ಕಿ.ಮೀ ಮೆಟ್ರೋ ಮಾರ್ಗ ಸೇರ್ಪಡೆ, ಮೆಟ್ರೋ ಯೋಜನೆ ಹಂತ-2, 2ಎ ಯೋಜನೆಯಡಿ ಹೊರವರ್ತುಲ ರಸ್ತೆ, ವಿಮಾನ ನಿಲ್ದಾಣ ಮಾರ್ಗವನ್ನು 2026ಕ್ಕೆ ಪೂರ್ಣ, ಅಂದಾಜು 15 ಸಾವಿರದ 661 ಕೋಟಿ ವೆಚ್ಚದಲ್ಲಿ ನಮ್ಮ ಮೆಟ್ರೋ ಹಂತ 3ಕ್ಕೆ ಆಡಳಿತಾತ್ಮಕ ಅನುಮೋದನೆ, ಸರ್ಜಾಪುರ ಅಗ್ರಹಾರ ಕೋರಮಂಗಳ ಡೈರಿ ವೃತ್ತ, ಮೇಖ್ರಿ ವೃತ್ತ ಹೆಬ್ಬಾಳ ಸಂಪರ್ಕಿಸುವ ಮಾರ್ಗ
- ಬೈಯಪ್ಪನಹಳ್ಳಿಯಿಂದ ಚಿಕ್ಕಬಾಣವರ, ಹೀಲಲಿಗೆಯಿಂದ ರಾಜಾನಕುಂಟೆ ವರೆಗೆ 42.2 ಕಿಲೋ ಮೀಟರ್
- ನಮ್ಮ ಮೆಟ್ರೋ ಹಂತ-3 ರಡಿ ಅಂದಾಜು 15,611 ಕೋಟಿ ರೂ. ವೆಚ್ಚ. ಇದಕ್ಕೆ ರಾಜ್ಯ ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದ್ದು. ಉಳಿದಿದ್ದನ್ನು ಕೇಂದ್ರ ಸರ್ಕಾರದ ಅನುಮೋದನೆ ನಿರೀಕ್ಷೆಯಲ್ಲಿದೆ.
- 3 ಲಕ್ಷ 71 ಸಾವಿರ ಕೋಟಿ ಗಾತ್ರದ ಬಜೆಟ್ ಮಂಡನ …
- ಬಿ.ಬಿ.ಎಂ.ಪಿ ವ್ಯಾಪ್ತಿಗೆ ಸೇರ್ಪಡೆಯಾದ 110 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ
- 200 ಕೋಟಿ ರೂ.ಗಳ ಮೊತ್ತದಲ್ಲಿ 110 ಹಳ್ಳಿಗಳಿಗೆ ಕುಡಿಯುವ ನೀರು ಸೌಲಭ್ಯ
- ಬೆಂಗಳೂರು ನಗರ – ಜಿಲ್ಲೆಯನ್ನು ನಾಲ್ಕು ವಲಯಗಳನ್ನಾಗಿ ವಿಂಗಡನೆ
- ನಗರದ ಹೊರವಲಯದ ನಾಲ್ಕು ಕಡೆಗಳಲ್ಲಿ 50 ರಿಂದ 100 ಎಕರೆ ಜಮೀನಿನಲ್ಲಿ ತ್ಯಾಜ್ಯ ಸಂಸ್ಕರಣೆ
- 30 ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟು ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ಘಟಕ ನಿರ್ಮಾಣ
- ಬಿಬಿಎಂಪಿಯ ಅರಣ್ಯ, ಕೆರೆ ಮತ್ತು ತೋಟಗಾರಿಕಾ ವಿಭಾಗವನ್ನು ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ನಿರ್ವಹಣಾ ವಿಭಾಗ ಎಂದು ಮರುನಾಮಕರಣ
- ನಗರದಲ್ಲಿ ವಾತಾವರಣದ ಸ್ವಚ್ಛತೆಗಾಗಿ ಮರಗಳ – ಗಣತಿ,
- ಕೆರೆ ಮತ್ತು ಉದ್ಯಾನವನಗಳ ತಂತ್ರಾಂಶ ಆಧಾರಿತ ಮೇಲ್ವಿಚಾರಣೆ. ಕೆರೆ ಮತ್ತು ಉದ್ಯಾನಗಳ ಅಭಿವೃದ್ಧಿ
- ರಾತ್ರಿ 1ರ ವರೆಗೂ ವ್ಯಾಪಾರ ವಹಿವಾಟು ವಿಸ್ತರ ಮಾಡಲಾಗಿದೆ.