Wednesday, December 18, 2024

ಡಾಲಿ ಧನಂಜಯಗೆ ಕಾಂಗ್ರೆಸ್ ಟಿಕೆಟ್ ಬಗ್ಗೆ ಚರ್ಚೆ ಆಗಿಲ್ಲ: ಸಿಎಂ ಸಿದ್ದರಾಮಯ್ಯ 

ಮಂಡ್ಯ: ಡಾಲಿ ಧನಂಜಯಗೆ ಕಾಂಗ್ರೆಸ್ ಟಿಕೆಟ್ ನೀಡುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಳವಳ್ಳಿ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮಾತನಾಡಿದ ಅವರು,ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದು ಈ ಬಾರಿ ಕನಿಷ್ಠ ಇಪ್ಪತ್ತು ಲೋಕಸಭಾ ಸ್ಥಾನಗಳನ್ನು ನಾವು ಗೆಲ್ಲಲಿದ್ದೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇವೇಳೆ ಚಿತ್ರನಟ ಡಾಲಿ ಧನಂಜಯ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವ ಬಗ್ಗೆ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಸಂಸದ ಪ್ರತಾಪ್ ಸಿಂಹ ಅವರ ಎದುರಾಳಿಯಾಗಿ ಕಾಂಗ್ರೆಸ್ ನಿಂದ ಚಿತ್ರನಟ ಡಾಲಿ ಧನಂಜಯ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯ ಬಗ್ಗೆ ವರದಿಯಾಗಿತ್ತು. ಈ ಬಗ್ಗೆ   ನಮ್ಮ ಪಕ್ಷದಲ್ಲಿ ಈ ಬಗ್ಗೆ ಚರ್ಚೆಯಾಗಿಲ್ಲ ಇದರ ಬಗ್ಗೆ ನನಗೆ ಗೊತ್ತೂ ಇಲ್ಲ ಎಂದರು.

 

RELATED ARTICLES

Related Articles

TRENDING ARTICLES